ಗ್ಯಾಂಗಸ್ಟರ್ ಅತೀಕನಿಂದ ವಶಪಡಿಸಿಕೊಂಡ ಜಮೀನಿನ ಮೇಲೆ ಬಡವರಿಗಾಗಿ ವಸತಿ ನಿರ್ಮಿಸಿದೆ ಉ.ಪ್ರ ಸರ್ಕಾರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಕೊಲೆಯಾದ ದರೋಡೆಕೋರ, ರಾಜಕಾರಣಿ ಅತೀಕ್ ಅಹ್ಮದ್ ವಶಪಡಿಸಿಕೊಂಡ ಭೂಮಿಯಲ್ಲಿ ಯೋಗಿ ಸರ್ಕಾರ ಬಡವರಿಗಾಗಿ ಸೂರು ನಿರ್ಮಿಸುತ್ತಿದೆ. ಈಗಾಗಲೇ 76 ಫ್ಲ್ಯಾಟ್‌ಗಳ ನಿರ್ಮಾಣ ಮುಕ್ತಾಯದ ಹಂತದಲ್ಲಿದ್ದು, ಶೀಘ್ರದಲ್ಲೇ ಬಡವರಿಗೆ ಹಂಚಿಕೆಯಾಗಲಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಡಿಸೆಂಬರ್ 26, 2021 ರಂದು ಪ್ರಯಾಗರಾಜ್‌ನ ಲುಕರ್‌ಗಂಜ್ ಪ್ರದೇಶದಲ್ಲಿ ಅತೀಕ್ ಸ್ವಾಧೀನಪಡಿಸಿಕೊಂಡ 1,731 ಚದರ ಮೀಟರ್ ಭೂಮಿಯಲ್ಲಿ ಈ ಕೈಗೆಟುಕುವ ವಸತಿ ಯೋಜನೆಗೆ ಅಡಿಗಲ್ಲು ಹಾಕಿದ್ದರು. ಈ ಯೋಜನೆಯನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಅಡಿಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳು ಕೈಗೆತ್ತಿಕೊಂಡಿದ್ದು, ಎರಡು ಬ್ಲಾಕ್‌ಗಳಲ್ಲಿ 76 ಫ್ಲಾಟ್‌ಗಳನ್ನು ನಿರ್ಮಿಸಲಾಗುತ್ತಿದೆ. ಪೂರ್ಣಗೊಂಡ ನಂತರ, ಸಿಎಂ ಯೋಗಿ ಆದಿತ್ಯನಾಥ್ ಫ್ಲ್ಯಾಟ್‌ಗಳನ್ನು ಬಡವರಿಗೆ ಹಸ್ತಾಂತರಿಸಲಿದ್ದಾರೆ ಎಂದು ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದರು.

ಅತೀಕ್ 2005 ರಲ್ಲಿ ಬಹುಜನ ಸಮಾಜ ಪಕ್ಷದ ಶಾಸಕ ರಾಜು ಪಾಲ್ ಹತ್ಯೆಯ ಜೊತೆಗೆ ಆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಹತ್ಯೆಯಲ್ಲಿ ಆರೋಪಿಯಾಗಿದ್ದರು.

ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅಹ್ಮದ್ ಅವರನ್ನು ಈ ವರ್ಷ ಏಪ್ರಿಲ್ 15 ರಂದು ಪ್ರಯಾಗ್‌ರಾಜ್‌ನಲ್ಲಿ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುತ್ತಿದ್ದಾಗ ಗುಂಡಿನ ದಾಳಿಗೆ ಒಳಗಾಗಿ ಸಾವನ್ನಪ್ಪಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!