Sunday, August 14, 2022

Latest Posts

ಅಮೆರಿಕದಲ್ಲಿ ವಿಮಾನ ಪತನ: ಓರ್ವ ಸಾವು, ಏಳು ಮಂದಿ ನಾಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕದ ಉತ್ತರ ಕೆರೊಲಿನಾದಲ್ಲಿ ಕಾರ್ಟೆರೆಟ್ ಕೌಂಟಿಯ ಬಳಿ ಇರುವ ಸಮುದ್ರದ ಕರಾವಳಿಯಲ್ಲಿ ವಿಮಾನವೊಂದು ಪತನವಾಗಿದ್ದು, ಓರ್ವ ಮೃತಪಟ್ಟಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ.

ವಿಮಾನದಲ್ಲಿ ಎಂಟು ಮಂದಿ ಪ್ರಯಾಣಿಸುತ್ತಿದ್ದರು. ವಿಮಾನ ಸಿಬ್ಬಂದಿ ಸೇರಿ ಏಳು ಮಂದಿ ಕಾಣೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಅಮೆರಿಕದ ಕೋಸ್ಟ್ ಗಾರ್ಡ್ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಕರಾವಳಿಯಿಂದ ಸಮುದ್ರದೆಡೆಗೆ ಸುಮಾರು ನಾಲ್ಕು ಮೈಲು ದೂರದಲ್ಲಿ ನೀರಿನಲ್ಲಿ ವಿಮಾನ ಪತನವಾಗಿದೆ ಎನ್ನುವ ಮಾಹಿತಿ ದೊರಕಿದೆ.

ವಿಮಾನ ದುರಂತಕ್ಕೀಡಾಗುವ ಮೊದಲೇ ರೇಡಾರ್ ನಿಯಂತ್ರಣದಿಂದ ತಪ್ಪಿಸಿಕೊಂಡಿತ್ತು. ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ ಮತ್ತು ಅಮೆರಿಕದ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss