ಹೊಸದಿಗಂತ ಡಿಜಿಟಲ್ ಡೆಸ್ಕ್:
ಏರೋ ಇಂಡಿಯಾ ವೈಮಾನಿಕ ಪ್ರದರ್ಶನ 2025ಕ್ಕೆ ದಿನಗಣನೆ ಶುರುವಾಗಿದ್ದು, ಈ ನಡುವಲ್ಲೇ ವಾಯುಪ್ರದೇಶವನ್ನು ಮುಚ್ಚುವ ಪರಿಷ್ಕೃತ ಸಮಯ ಪಟ್ಟಿಯನ್ನು ಕೆಐಎ ಪ್ರಕಟಿಸಿದೆ.
ಫೆಬ್ರವರಿ 5ರಿಂದ 14ರವರೆಗೆ ಕೆಲ ಅವಧಿಗಳಲ್ಲಿ ವಾಯುಪ್ರದೇಶವನ್ನು ಮುಚ್ಚುವುದಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಿಳಿಸಿದೆ.
- ಫೆಬ್ರವರಿ 5, 6 ಮತ್ತು 8ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ಮತ್ತು ಮಧ್ಯಾಹ್ನ 3ರಿಂದ 4.30 ರವರೆಗೆ
- ಫೆಬ್ರವರಿ 7 ಬೆಳಿಗ್ಗೆ 9ರಿಂದ 11ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4.30ರವರೆಗೆ
- ಫೆಬ್ರವರಿ 8 ಬೆಳಿಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ಮತ್ತು ಮಧ್ಯಾಹ್ನ 3ರಿಂದ 4.30 ರವರೆಗೆ
- ಫೆಬ್ರವರಿ 9 ಬೆಳಿಗ್ಗೆ 9ರಿಂದ 11ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4.30 ರವರೆಗೆ
- ಫೆಬ್ರವರಿ 10ರಂದು ಬೆಳಿಗ್ಗೆ 9ರಿಂದ 11.30ರವರೆಗೆ ಮತ್ತು ಮಧ್ಯಾಹ್ನ 2.30ರಿಂದ 3.30ರವರೆಗೆ.
- ಫೆಬ್ರವರಿ 11 ಮತ್ತು 12ರಂದು ಮಧ್ಯಾಹ್ನ 12ರಿಂದ 2.30ರವರೆಗೆ.
- ಫೆಬ್ರವರಿ 13 ಮತ್ತು 14ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12ರವರೆಗೆ ಮತ್ತು ಮಧ್ಯಾಹ್ನ 2.30ರಿಂದ ಸಂಜೆ 5ರವರೆಗೆ ವಾಯುಪ್ರದೇಶವನ್ನು ಮುಚ್ಚಲಾಗುವುದು ಎಂದು ತಿಳಿಸಿದೆ.
ಏಷ್ಯಾದ ಅತಿ ದೊಡ್ಡ ಏರ್ ಶೋ ಯಲಹಂಕದ ವಾಯನೆಲೆಯಲ್ಲಿ ಫೆಬ್ರವರಿ 10 ರಿಂದ 14 ರವರಗೆ ನಡೆಯಲಿದ್ದು, ದೇಶ ವಿದೇಶಗಳ ಅನೇಕ ಗಣ್ಯರು, ಉದ್ಯಮಿಗಳು, ವಾಯುಪಡೆಗಳ ಸಿಬ್ಬಂದಿ ಆಗಮಿಸಲಿದ್ದಾರೆ. ಆಕರ್ಷಕ ಏರ್ ಶೋ ಕೂಡ ನಡೆಯಲಿದೆ.