ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ವರದಿ, ಶಿವಮೊಗ್ಗ:
ವಿಮಾನ ನಿಲ್ದಾಣಕ್ಕಾಗಿ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ ಸಂತ್ರಸ್ತರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
2007 ರಲ್ಲಿ ಉಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ವಿಮಾನ ನಿಲ್ದಾಣಕ್ಕಾಗಿ ಭೂಮಿ ಕಳೆದುಕೊಂಡ ಸಂತ್ರಸ್ತ ರೈತರಿಗೆ ನಿವೇಶನ ನೀಡುವುದಾಗಿ ಭರವಸೆ ನೀಡಿದ್ದಿರಿ. ನಿಮ್ಮ ಭರವಸೆ ಮೇರೆಗೆ ನಮ್ಮ ಭೂಮಿ ಬಿಟ್ಟುಕೊಟ್ಟಿದ್ದೆವು. ಆದರೆ ಈವರೆಗೆ ನಿವೇಶನ ನೀಡಿಲ್ಲ ಎಂದು ಅಳಲು ತೋಡಿಕೊಂಡರು.
ಈ ವೇಳೆ ಜಿಪಂ ಮಾಜಿ ಉಪಾಧ್ಯಕ್ಷೆ ವೇದಾ ವಿಜಯ್ ಕುಮಾರ್, ಪಿಎಲ್ಡಿ ಬ್ಯಾಂಕ್ ಉಪಾಧ್ಯಕ್ಷ ಆರ್.ವಿಜಯಕುಮಾರ್, ಸೋಗಾನೆ ಗ್ರಾಪಂ ಅಧ್ಯಕ್ಷ ಅನಿಲ್ ಕುಮಾ್, ಸದಸ್ಯರಾದ ಗೋವಿಂದರಾಜು, ಹೇಮೇಶ್ ನಾಯ್ಕ, ರಾಜಶೇಖ್, ಮುಖಂಡರಾದ ತಂಗವೇಲು, ಅರುಣ ನಾಯ್ಡು, ಪುಟ್ಟರಾಜು, ಗಣೇಶ್ ಇನ್ನಿತರರು ಇದ್ದರು.
ಸಂತ್ರಸ್ತರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ , ನಿಮಗೆ ನಿವೇಶನ ನೀಡುವುದು ನನ್ನ ಜವಾಬ್ದಾರಿ ಎಂದು ಭರವಸೆ ನೀಡಿದರು.