ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ 15ನೇ ಆವೃತ್ತಿಯ ವೈಮಾನಿಕ ಪ್ರದರ್ಶನ ಏರೋ ಇಂಡಿಯಾ 2025 ಇಂದಿನಿಂದ ಆರಂಭಗೊಳ್ಳುತ್ತಿದೆ. ಈ ಹಿನ್ನೆಲೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.
ಇಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 12ರ ವರೆಗೆ, ಮಧ್ಯಾಹ್ನ 2 ರಿಂದ ಸಂಜೆ 4ರ ವರೆಗೆ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಲಿದೆ. ಫೆಬ್ರವರಿ 11 ಮತ್ತು 12 ರಂದು ಮಧ್ಯಾಹ್ನ 12 ರಿಂದ ಮಧ್ಯಾಹ್ನ 3ರ ವರೆಗೆ, ಫೆಬ್ರವರಿ 13 ಮತ್ತು 14ರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12ರ ವರೆಗೆ, ಮಧ್ಯಾಹ್ನ 2 ರಿಂದ ಸಂಜೆ 5ರ ವರೆಗೆ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೂಲಗಳು ತಿಳಿಸಿವೆ. ಏರ್‌ಶೋನಲ್ಲಿ ವೈಮಾನಿಕ ಪ್ರದರ್ಶನ ಹಿನ್ನೆಲೆಯಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿದುಬಂದಿದೆ.
ಯಲಹಂಕ ವಾಯುನೆಲೆಯಲ್ಲಿ ಇಂದು ಬೆಳಗ್ಗೆ 9:30ರ ವೇಳೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಲಿದ್ದಾರೆ. ದೇಶ,ವಿದೇಶಗಳ ಪ್ರಮುಖ ನಾಯಕರು, ರಕ್ಷಣಾ ವಿಭಾಗದ ಅಧಿಕಾರಿಗಳು ಏರ್ ಶೋ ನಲ್ಲಿ ಭಾಗಿಯಾಗಲಿದ್ದಾರೆ. ಫೆಬ್ರವರಿ 14ರ ವರೆಗೆ ನಡೆಯಲಿರುವ ಏರ್ ಶೋನಲ್ಲಿ ಅಮೆರಿಕ, ರಷ್ಯನ್ ಸೇರಿದಂತೆ ವಿವಿಧ ದೇಶಗಳ ಯುದ್ಧ ವಿಮಾನಗಳು ಭಾಗಿಯಾಗಲಿವೆ.