ಆಗಸ್ಟ್ 11ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ಮೋದಿ ಅವರಿಂದ ಉದ್ಘಾಟನೆಯಾದ ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಲ್ಲಿ ಇನ್ನೇನು ಕೆಲವೇ ತಿಂಗಳಿನಲ್ಲಿ ವಿಮಾನ ಹಾರಾಟ ಆರಂಭವಾಗಲಿದೆ.

ಶಿವಮೊಗ್ಗದಿಂದ ಮೊದಲ ವಿಮಾನ ಬೆಂಗಳೂರಿಗೆ ಹಾರಾಡಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಸಾಕಷ್ಟು ಪ್ರೇಕ್ಷಣೀಯ ಸ್ಥಳಗಳಿದ್ದು, ಜಿಲ್ಲೆಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ವಿಮಾನ ನಿಲ್ದಾಣ ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

ಇಂಡಿಗೋ ಏರ್‌ಲೈನ್ಸ್ ಅಧಿಕಾರಿಗಳು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಎಲ್ಲ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ವಿಮಾನ ಹಾರಾಟಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ತಯಾರಾಗಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!