ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಿಚಾಂಗ್ ಚಂಡಮಾರುತದ ಅಬ್ಬರದಿಂದಾಗಿ ಚೆನ್ನೈನಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಿನ್ನೆಯಿಂದ ಚೆನ್ನೈ ಸಂಪರ್ಕಿಸುವ ನೂರಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ.
ಇಂಡಿಗೋದ 550, ವಿಸ್ತಾರಾದ 10 ವಿಮಾನಗಳ ಸಂಚಾರವನ್ನು ಕ್ಯಾನ್ಸಲ್ ಮಾಡಲಾಗಿದೆ. ಇಂದು ಚೆನ್ನೈನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ವಿಮಾನ ನಿಲ್ದಾಣವೂ ಸೇರಿದಂತೆ ಜಲಾವೃತಗೊಂಡಿರುವ ಹಲವೆಡೆ ನೀರಿನ ಮಟ್ಟ ನಿಧಾನವಾಗಿ ಇಳಿಕೆಯಾಗುತ್ತಿದೆ. ಹೀಗಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆಯಿಂದ ವಿಮಾನ ಸಂಚಾರ ಆರಂಭಿಸಲಾಗಿತ್ತು. ಆದರೆ ಆಂಧ್ರ ಪ್ರದೇಶಕ್ಕೆ ಚಂಡಮಾರುತ ಅಪ್ಪಳಿಸಿದ ಕಾರಣ ವಿಶಾಖಪಟ್ಟಣ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಇಂಡಿಗೊ 60 ವಿಮಾನ ಹಾರಾಟವನ್ನು ರದ್ದುಪಡಿಸಿದೆ. ಅಲ್ಲದೆ ಏರ್ ಇಂಡಿಯಾ ಚೆನ್ನೈ ವಿಮಾನ ನಿಲ್ದಾಣಕ್ಕೆ ಬರುವ 33 ವಿಮಾನಗಳನ್ನು ನಿನ್ನೆ ರದ್ದುಪಡಿಸಿದೆ. ಜತೆಗೆ ಇಂದು ಹೊರಡಬೇಕಿದ್ದ 20 ವಿಮಾನಗಳನ್ನು ರದ್ದುಪಡಿಸಲಾಗಿದೆ.