ಪ್ರತಿಕೂಲ ಹವಾಮಾನದಿಂದ 20 ವಿಮಾನಗಳು ವಿಳಂಬ: ಐಜಿಐಎನಲ್ಲಿ ಪ್ರಯಾಣಿಕರ ಪರದಾಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರತಿಕೂಲ ಹವಾಮಾನ ಮತ್ತು ಇತರ ಕಾರ್ಯಾಚರಣೆಯ ಸಮಸ್ಯೆಗಳಿಂದಾಗಿ ರಾಷ್ಟ್ರ ರಾಜಧಾನಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ (IGIA) ಸುಮಾರು 20 ವಿಮಾನಗಳು ಭಾನುವಾರ ಮಧ್ಯಾಹ್ನ 1 ಗಂಟೆಯವರೆಗೆ ವಿಳಂಬವಾಗಿವೆ ಎಂದು ದೆಹಲಿ ವಿಮಾನ ನಿಲ್ದಾಣದ ಅಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿ ಸೇರಿದಂತೆ ಉತ್ತರ ಭಾರತದಾದ್ಯಂತ ಶೀತ ಅಲೆಗಳ ಪರಿಸ್ಥಿತಿಗಳು ಮತ್ತು ದಟ್ಟವಾದ ಮಂಜು ಕಂಡುಬರುತ್ತಿದೆ, ಇದು ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಗೆ ಅಡ್ಡಿಯಾಗಿದ್ದು, ವಿವಿಧ ಸ್ಥಳಗಳಿಂದ ವಿಮಾನ ನಿಲ್ದಾಣಕ್ಕೆ ಸುಮಾರು 13 ಒಳಬರುವ ವಿಮಾನಗಳು ವಿಳಂಬವಾಗಿವೆ.

ಈ ನಡುವೆ ಯಾವುದೇ ಮಾಹಿತಿಯಿಲ್ಲದ ಕಾರಣ ಸರಿಯಾದ ಸಮಯಕ್ಕೆ ವಿಮಾನ ನಿಲ್ದಾಣ ತಲುಪಿದ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಯಿತು. ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ನಡುವೆ ತೀವ್ರ ಚಳಿಗೆ ಪ್ರಯಾಣಿಕರು ತತ್ತರಿಸಿದ್ದಾರೆ.

ತಮ್ಮ ವಿಮಾನದ ಸ್ಥಿತಿಯ ಬಗ್ಗೆ ಹೊಸ ಅಪ್ಟೇಡ್‌ಗಾಗಿ ಸಂಬಂಧಪಟ್ಟ ವಿಮಾನಯಾನ ಸಂಸ್ಥೆಯನ್ನು ಸಂಪರ್ಕಿಸುವಂತೆ ವಿಮಾನ ನಿಲ್ದಾಣವು ಪ್ರಯಾಣಿಕರನ್ನು ವಿನಂತಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!