September 17, 2026
Thursday, September 17, 2026
spot_img

ಮಳೆ ಅಬ್ಬರಕ್ಕೆ ವಿಮಾನಗಳ ಹಾರಾಟ ವಿಳಂಬ: ಏರ್ ಪೋರ್ಟ್ ಗೆ ಹೊರಡೋ ಮುನ್ನ ಫ್ಲೈಟ್‌ ಸ್ಟೇಟಸ್‌ ಚೆಕ್ ಮಾಡ್ಕೊಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಹಾಗೂ ಮುಂಬೈನಲ್ಲಿ ಸುರಿಯುತ್ತಿರುವ ಭಾರೀ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಹಲವು ವಿಮಾನಗಳ ಹಾರಾಟ ವಿಳಂಬವಾಗಿದ್ದು, ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ತೆರಳುವ ಮುನ್ನ ತಮ್ಮ ಫ್ಲೈಟ್‌ ಸ್ಥಿತಿಯನ್ನು ಪರಿಶೀಲಿಸುವಂತೆ ಪ್ರಮುಖ ಏರ್‌ಲೈನ್‌ಗಳು ಮನವಿ ಮಾಡಿವೆ.

ಇಂಡಿಗೋ ಸಲಹೆ

ದೆಹಲಿ ಪ್ರದೇಶದ ಹವಾಮಾನದಿಂದ ವಿಮಾನಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಉಂಟಾಗುವ ಸಾಧ್ಯತೆ ಇದೆ ಎಂದು ಇಂಡಿಗೋ ತಿಳಿಸಿದೆ. ಮಳೆಯ ಕಾರಣ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಿರುವುದರಿಂದ ವಿಮಾನ ನಿಲ್ದಾಣಕ್ಕೆ ಮುಂಚಿತವಾಗಿಯೇ ಹೊರಡುವಂತೆ ಪ್ರಯಾಣಿಕರಿಗೆ ಸೂಚಿಸಿದೆ.

ಇದನ್ನೂ ಓದಿ:

ಏರ್ ಇಂಡಿಯಾ, ಸ್ಪೈಸ್‌ಜೆಟ್‌ ಎಚ್ಚರಿಕೆ

ಏರ್ ಇಂಡಿಯಾ ಮತ್ತು ಸ್ಪೈಸ್‌ಜೆಟ್‌ ಕೂಡ ದೆಹಲಿ ಹಾಗೂ ಮುಂಬೈನಲ್ಲಿ ಹವಾಮಾನ ವೈಪರೀತ್ಯದಿಂದ ಆಗಮನ, ನಿರ್ಗಮನ ಮತ್ತು ಸಂಪರ್ಕ ವಿಮಾನಗಳ ಮೇಲೆ ಪರಿಣಾಮ ಬೀಳಬಹುದು ಎಂದು ಎಚ್ಚರಿಕೆ ನೀಡಿವೆ. ಪ್ರಯಾಣಿಕರು ಅಧಿಕೃತ ವೆಬ್‌ಸೈಟ್‌ ಅಥವಾ ಮೊಬೈಲ್‌ ಆ್ಯಪ್‌ ಮೂಲಕ ವಿಮಾನ ಮಾಹಿತಿ ಪರಿಶೀಲಿಸುವಂತೆ ಸಲಹೆ ನೀಡಿವೆ.

ಇನ್ನೂ ಕೆಲವು ದಿನ ಮಳೆ ಸಾಧ್ಯತೆ

ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ, ದೆಹಲಿ-ಎನ್‌ಸಿಆರ್‌ನಲ್ಲಿ ಮುಂದಿನ ಕೆಲವು ದಿನ ಮೋಡ ಕವಿದ ವಾತಾವರಣ, ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಮುಂಬೈಯಲ್ಲೂ ಭಾರೀ ಮಳೆ ಮುಂದುವರಿಯುತ್ತಿರುವುದರಿಂದ ವಿಮಾನ ಸಂಚಾರದಲ್ಲಿ ಇನ್ನಷ್ಟು ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !