ಹೊಸದಿಗಂತ ಡಿಜಿಟಲ್ ಡೆಸ್ಕ್:
ಏರೋ ಇಂಡಿಯಾ 2025’ ಏರ್ ಶೋಗೆ ದಿನಗಣನೆ ಆರಂಭವಾಗಿದೆ. ಫೆಬ್ರವರಿ 10 ರಿಂದ 14 ರವರಗೆ ಯಲಹಂಕದಲ್ಲಿ ಏರ್ ಶೋ ನಡೆಯಲಿರುವ ಕಾರಣ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ವಿಮಾನಗಳ ಕಾರ್ಯಾಚರಣೆ ಮೇಲೆಯೂ ಪರಿಣಾಮವಾಗಲಿದೆ.
ಏರ್ ಶೋ ವೇಳೆ ನಿಗದಿತ ಸಮಯದಲ್ಲಿ ವಿಮಾನಗಳ ಹಾರಾಟ ಬಂದ್ ಆಗಲಿದೆ. ಲ್ಯಾಂಡಿಂಗ್ ಹಾಗೂ ಟೇಕಾಫ್ಗಳು ಇರುವುದಿಲ್ಲ. ಹೀಗಾಗಿ ಏರ್ಲೈನ್ಸ್ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡು ಬರುವಂತೆ ಪ್ರಯಾಣಿಕರಿಗೆ ಸೂಚಿಸಲಾಗಿದೆ.
ಏರ್ ಶೋ ವೇಳೆ ವಾಯುಪಡೆ ವಿಮಾನಗಳ ಹಾರಾಟಕ್ಕೆ ಅಡ್ಡಿಯಾಗದಂತೆ ಮುಂಜಾಗ್ರತಾ ಕ್ರಮವಾಗಿ ಕೆಂಪೇಗೌಡ ಏರ್ಪೋರ್ಟ್ನಿಂದ ಟೇಕಾಫ್ ಮತ್ತು ಲ್ಯಾಂಡಿಂಗ್ ಸ್ಥಗಿತಗೊಳಿಸಲಾಗುತ್ತದೆ. ಫೆಬ್ರವರಿ 5 ರಿಂದ 8 ರವರೆಗೆ ಬೆಳಗ್ಗೆ 9 ಗಂಟೆಯಿಂದ 12 ಮತ್ತು ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆವರೆಗೂ ವಿಮಾನಗಳ ಹಾರಾಟಕ್ಕೆ ನಿರ್ಬಂಧವಿದೆ. ಫೆಬ್ರವರಿ 09 ರಂದು ಬೆಳಗ್ಗೆ 9 ರಿಂದ 12 ಗಂಟೆವರೆಗೂ ವಿಮಾನಗಳ ಹಾರಾಟ ಸ್ಥಬ್ದವಾಗಲಿದೆ.
ಫೆಬ್ರವರಿ 10 ರಂದು ಬೆಳಗ್ಗೆ 9 ಗಂಟೆಯಿಂದ 12 ಮತ್ತು ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆ ವರೆಗೂ ವಿಮಾನ ಕಾರ್ಯಾಚರಣೆ ಇರುವುದಿಲ್ಲ. ಫೆಬ್ರವರಿ 11 ಮತ್ತು 12 ರಂದು 12 ಗಂಟೆಯಿಂದ 3 ಗಂಟೆವರೆಗೂ ವಿಮಾನಗಳ ಹಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಫೆಬ್ರವರಿ 13 ಮತ್ತು 14 ರಂದು ಬೆಳಗ್ಗೆ 9 ರಿಂದ 12 ಗಂಟೆ ಮತ್ತು ಮದ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆವರೆಗೂ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಕಾರ್ಯಾಚರಣೆ ಇರುವುದಿಲ್ಲ.