ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಕೊಡಗು:
ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಜೂ. 11 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದು, ಪ್ರವಾಹ ಸಂತ್ರಸ್ತರಿಗಾಗಿ ಬಿಳಿಗೇರಿ ಗ್ರಾಮದಲ್ಲಿ ನಿರ್ಮಿಸಲಾಗಿರುವ 22 ಮನೆಗಳನ್ನು ಫಲಾನಿಭವಿಗಳಿಗೆ ಹಸ್ತಾಂತರಿಸಲಿದ್ದಾರೆ.
ಅಂದು ಮಧ್ಯಾಹ್ನ ಈ ಕಾರ್ಯಕ್ರಮ ನಡೆಯಲಿದ್ದು, ಅದಕ್ಕೂ ಮುನ್ನ ಸಚಿವರು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣ ಹಾಗೂ ಸೋಂಕಿತರ ಚಿಕಿತ್ಸೆಗೆ ಸಂಬಂಧಿಸಿದಂತೆ ಹಾಗೂ ಮಳೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾಧಿಕಾರಿಯವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜತೆ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಮನೆ ಹಸ್ತಾಂತರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪ್ರಾರಂಭವಾಗಿರುವ ಕೋವಿಡ್-19 ಪರೀಕ್ಷಾ ಕೇಂದ್ರಕ್ಕೆ ಭೇಟಿ ಹಾಗೂ ವಿವಿಧ ಕೋವಿಡ್ ಕೇರ್ ಸೆಂಟರ್ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.
ನಂತರ ಸಂಜೆ 4 ಗಂಟೆಗೆ ವೀರಾಜಪೇಟೆ ತಾಲೂಕು ಆಸ್ಪತ್ರೆಯಲ್ಲಿ ನೂತನವಾಗಿ ಪ್ರಾರಂಭಿಸಲಾಗುತ್ತಿರುವ ಆಕ್ಸಿಜನ್ ಜನರೇಷನ್ ಪ್ಲಾಂಟ್ನ ಪರಿವೀಕ್ಷಣೆ ನಡೆಸಲಿದ್ದಾರೆ.
ಸಂಜೆ 5 ಗಂಟೆಗೆ ಪಾಲಿಬೆಟ್ಟದಲ್ಲಿ ‘ಡಾಕ್ಟರ್ ಫಾರ್ ಯು’ ಎನ್ಜಿಒ ಸಹಯೋಗದಲ್ಲಿ ಆರಂಭಿಸಿರುವ ಡಿಸಿಎಚ್ಸಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಉಸ್ತುವಾರಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಟಿ.ಎನ್.ರವಿಪ್ರಕಾಶ್ ಅವರು ತಿಳಿಸಿದ್ದಾರೆ.