ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ, ಪ್ರವಾಹದ ಮುನ್ಸೂಚನೆ ಹಿನ್ನೆಲೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಆಗಮಿಸಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆಯು, ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.
ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮೇ 29 ಮತ್ತು 30ರಂದು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಕುಶಾಲನಗರ ತಾಲೂಕಿನ ದುಬಾರೆ ಸಾಕಾನೆ ಶಿಬಿರಕ್ಕೆ ತಾತ್ಕಾಲಿಕವಾಗಿ ಪ್ರವಾಸಿಗರ ಪ್ರವೇಶವನ್ನು ನಿರ್ಬಂಸಲಾಗಿದೆ. ದುಬಾರೆ ಸಾಕಾನೆ ಶಿಬಿರಕ್ಕೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದ್ದು ಶಾಲಾ-ಕಾಲೇಜುಗಳಿಗೆ ಎರಡು ದಿನ ರದೆ ಘೋಷಿಸಲಾಗಿದೆ.
ಪ್ರಸ್ತುತ ವರ್ಷ ಅವಧಿಗೂ ಮುನ್ನ ಕೊಡಗಿನಲ್ಲಿ ಮುಂಗಾರು ಆರಂಭಗೊಂಡು ಇಲ್ಲಿಯವರೆಗೆ 25 ಇಂಚಿಗೂ ಅಧಿಕ ಮಳೆಯಾಗಿದೆ. ಗಾಳಿ ಮಳೆಯ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗೂ ಅಪಾರ ಹಾನಿ ಉಂಟಾಗಿದೆ. ಈ ಬೆಳವಣಿಗೆಯಿಂದ ಜಿಲ್ಲೆಯಲ್ಲಿ ಆತಂಕದ ಛಾಯೆ ಮೂಡಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆಗಳಿರುವುದರಿಂದ ಜಿಲ್ಲಾಡಳಿತ ಎನ್‌ಡಿಆರ್‌ಎಫ್ ತಂಡವನ್ನು ಅವಧಿಗೂ ಮೊದಲೇ ಜಿಲ್ಲೆಯಲ್ಲಿ ನಿಯೋಜಿಸಿದೆ.