ಭೀಕರ ಪ್ರವಾಹಕ್ಕೆ ತತ್ತರಿಸಿದ ಅಸ್ಸಾಂ: 37ಕ್ಕೆ ಏರಿದ ಸಾವಿನ ಸಂಖ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಸ್ಸಾಂನಲ್ಲಿ ಭೀಕರ ಪ್ರವಾಹದಿಂದ ಜನ ಜೀವನ ಅಸ್ತವ್ಯಸ್ತವಾಗಿದೆ.3.90 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಲ್ಲಿ ಸಿಲುಕಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ರಾಜ್ಯದ ಕೆಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವುದರೊಂದಿಗೆ ಪ್ರವಾಹ ಪರಿಸ್ಥಿತಿಯಲ್ಲಿ ಸ್ವಲ್ಪ ಸುಧಾರಣೆ ಕಂಡುಬಂದಿದ್ದರೂ, 19 ಜಿಲ್ಲೆಗಳ ಪರಿಸ್ಥಿತಿ ಇನ್ನೂ ಹಾಗೆಯೇ ಇದೆ ಎಂದು ಅವರು ಹೇಳಿದ್ದಾರೆ.ಪ್ರವಾಹ, ಭೂಕುಸಿತ ಮತ್ತು ಚಂಡಮಾರುತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 37ಕ್ಕೆ ತಲುಪಿದೆ ಮತ್ತು ಓರ್ವ ವ್ಯಕ್ತಿ ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಶುಕ್ರವಾರ ಸಂಜೆಯ ವೇಳೆಗೆ ಕಮ್ರೂಪ್, ತಮುಲ್ಪುರ್, ಹೈಲಕಂಡಿ, ಉದಲ್ಗುರಿ, ಹೊಜೈ, ಧುಬ್ರಿ, ಬಾರ್ಪೇಟಾ, ಬಿಸ್ವಾನಾಥ್, ನಲ್ಬಾರಿ, ಬೊಂಗೈಗಾಂವ್, ಬಕ್ಸಾ, ಕರೀಂಗಂಜ್, ದಕ್ಷಿಣ ಸಲ್ಮಾರಾ, ಗೋಲ್ಪಾರಾ, ದರ್ರಾಂಗ್, ಬಜಾಲಿ, ನಾಗಾನ್, ಕಚಾರ್ ಮತ್ತು ಕಮ್ರೂಪ್ ಜಿಲ್ಲೆಗಳಲ್ಲಿ ಒಟ್ಟು 3,90,491 ಮಂದಿ ಪ್ರವಾಹಕ್ಕೆ ಸಿಲುಕಿ ತೊಂದರೆಗೆ ಒಳಗಾಗಿದ್ದಾರೆ. ಕರೀಂಗಂಜ್ ಅತಿ ಹೆಚ್ಚು ಹಾನಿಗೊಳಗಾದ ಜಿಲ್ಲೆಯಾಗಿದ್ದು, 2.40 ಲಕ್ಷಕ್ಕೂ ಹೆಚ್ಚು ಜನರಿಗೆ ಜಲ ದಿಗ್ಬಂಧನಕ್ಕೆ ಒಳಗಾಗಿದ್ದಾರೆ.

ರಾಜ್ಯದ ಪ್ರಮುಖ ನದಿಗಳಾದ ಕಂಪುರ್ ಮತ್ತು ಧರಮ್ತುಲ್‌ನ ಕೊಪಿಲಿ, ಬಿಪಿ ಘಾಟ್‌ನ ಬರಾಕ್ ಮತ್ತು ಕರೀಂಗಂಜ್‌ನ ಕುಶಿಯಾರಾ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ. 15,000ಕ್ಕೂ ಹೆಚ್ಚು ಜನರಿಗೆ ಆಶ್ರಯ ನೀಡುವ 100ಕ್ಕೂ ಹೆಚ್ಚು ಪರಿಹಾರ ಶಿಬಿರಗಳನ್ನು ತೆರೆಯಲಾಗಿದ್ದು, 125 ಪರಿಹಾರ ವಿತರಣಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ವಿವಿಧ ಜಿಲ್ಲೆಗಳಲ್ಲಿ ಮನೆಗಳು, ದನದ ಕೊಟ್ಟಿಗೆಗಳು, ರಸ್ತೆಗಳು, ಸೇತುವೆಗಳು, ವಿದ್ಯುತ್‌ ಕಂಬಗಳು, ಟ್ರಾನ್ಸ್‌ಫಾರ್ಮರ್‌ ಸೇರಿದಂತೆ ಮೂಲಸೌಕರ್ಯಗಳಿಗೆ ಹಾನಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!