ಭಾರೀ ಮಳೆ, ಪ್ರವಾಹದಲ್ಲಿ ಕೊಚ್ಚಿ ಹೋದ ಮರದ ಸೇತುವೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಈಶಾನ್ಯ ರಾಜ್ಯ ಮೇಘಾಲಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ, ಭೂಕುಸಿತ ಉಂಟಾಗುತ್ತಿದೆ. ಮೇಘಾಲಯದ ದಕ್ಷಿಣ ಗಾರೋ ಹಿಲ್ಸ್ ಮತ್ತು ವೆಸ್ಟ್ ಗಾರೋ ಹಿಲ್ಸ್ ಜಿಲ್ಲೆಗಳ ಗಡಿಯಲ್ಲಿರುವ ಜಿಜಿಕಾದಿಂದ ಮೆಗುವಾಕ್ಕೆ ಸಂಪರ್ಕಿಸುವ ಮರದ ಸೇತುವೆ ಗುರುವಾರ ಜೂನ್ 9 ರಂದು ಪ್ರವಾಹದ ನೀರಿನಲ್ಲಿ ಕೊಚ್ಚಿಹೋಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಇದೀಗ ಸಂಪರ್ಕವಿಲ್ಲದೆ ಅಲ್ಲಿನ ಜನ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಭಾರೀ ಮಳೆಯಿಂದಾಗಿ ಈಗಾಗಲೇ ಹಲವರು ಸಾವನ್ನಪ್ಪಿದ್ದರೆ, ಹೆಚ್ಚಿನ ಸಂಖ್ಯೆಯ ಜನ ತಮ್ಮ ಮನೆಗಳನ್ನು ತೊರೆದು ಸುರಕ್ಷಿತ ಸ್ಥಳವನ್ನು ಹುಡುಕುತ್ತಿದ್ದಾರೆ. ಗಾರೋ ಹಿಲ್ಸ್‌ನ ಎರಡು ವಿಭಿನ್ನ ಸ್ಥಳಗಳಲ್ಲಿ ಭೂಕುಸಿತ ಉಂಟಾಗಿದ್ದು, ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಗುರುವಾರ ಜೀವಂತ ಸಮಾಧಿಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!