ಅಸ್ಸಾಂನಲ್ಲಿ ಮುಂದುವರಿದ ಪ್ರವಾಹ ಪರಿಸ್ಥಿತಿ: ಅಗತ್ಯ ಬೆಂಬಲ ನೀಡುವುದಾಗಿ ಮೋದಿ ಭರವಸೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಸ್ಸಾಂನಲ್ಲಿ ಮಳೆ ಮುಂದುವರಿದಿದ್ದು, ಪ್ರವಾಹ ಮತ್ತು ಭೂಕುಸಿತದ ಘಟನೆಗಳಲ್ಲಿ ಎಂಟಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಬರ್ಪೇಟಾ, ದಾರಂಗ್, ಹೈಲಕಂಡಿ, ಕರೀಮ್‌ಗಂಜ್ ಮತ್ತು ಸೋನಿತ್‌ಪುರ ಜಿಲ್ಲೆಗಳಲ್ಲಿ ಸಾವುಗಳು ವರದಿಯಾಗಿವೆ. ರಾಜ್ಯದ ಐದು ಜಿಲ್ಲೆಗಳಲ್ಲಿ ಎಂಟು ಮಂದಿ ನಾಪತ್ತೆಯಾಗಿದ್ದಾರೆ.

ಪ್ರವಾಹ ಪರಿಸ್ಥಿತಿ ಬಗ್ಗೆ ಅಸ್ಸಾಂ ಸಿಎಂ ಜೊತೆ ಮಾತನಾಡಿ ರಾಜ್ಯದಲ್ಲಿನ ಪ್ರವಾಹದ ಪರಿಸ್ಥಿತಿಯನ್ನು ಪ್ರಧಾನಿ ಮೋದಿ ಅವಲೋಕಿಸಿದರು. ಕೇಂದ್ರದಿಂದ ಸಾಧ್ಯವಿರುವ ಎಲ್ಲ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಪ್ರವಾಹದಿಂದ ಹಾನಿಗೊಳಗಾದ ಅಸ್ಸಾಂನ ಜನರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ, ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಕಳೆದ 24 ಗಂಟೆಗಳಲ್ಲಿ 32ಜಿಲ್ಲೆಗಳ 4,296 ಗ್ರಾಮಗಳಲ್ಲಿನ 30,99,762 ಜನ ಪ್ರವಾಹಕ್ಕೆ ಸಿಲುಕಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ವರದಿ ನೀಡಿದೆ. ಅಸ್ಸಾಂನ ಚಿರಾಂಗ್ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಇನ್ನೂ ಕಠೋರವಾಗಿದ್ದು, ಸಾವಿರಾರು ಜನರು ತೊಂದರೆಗೀಡಾಗಿದ್ದಾರೆ. SDRF ತಂಡಗಳು 100 ಕ್ಕೂ ಹೆಚ್ಚು ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಒಟ್ಟು 1,56,365 ಜನ 514 ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ.

(ಭಾನುವಾರ) ಇಂದು ಸೆಂಟ್ರಲ್ ವಾಟರ್ ಕಮಿಷನ್ (CWC) ಬುಲೆಟಿನ್ ಪ್ರಕಾರ, ಕೊಪಿಲಿ, ಬ್ರಹ್ಮಪುತ್ರ, ಜಿಯಾ- ಭಾರಾಲಿ, ಪುತಿಮತಿ, ಪಗ್ಲಾಡಿಯಾ, ಮಾನಸ್, ಬೆಕಿ, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!