ಪ್ರವಾಹ ಪರಿಸ್ಥಿತಿ ಪರಿಶೀಲನೆ, ಸಂತ್ರಸ್ತರಿಗೆ 1.2 ಲಕ್ಷ ಪರಿಹಾರ ನೀಡಲು ಸಿಎಂ ತೀರ್ಮಾನ

ಹೊಸದಿಗಂತ ಬೆಳಗಾವಿ:

ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದ ಜೊತೆಗೆ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.nಬಿಜೆಪಿಯು ಪರಿಹಾರ ವಿತರಣೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಹಿಂದೆ ಬಿ.ಎಸ್.ಯಡಿಯೂರಪ್ಪನವರು ಸಂಪೂರ್ಣ ಮನೆ ಹಾನಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಈ ನೆರವಿನ ದುರುಪಯೋಗವಾಯಿತು. ಹಾಗೂ ಹಲವರಿಗೆ ಮೊದಲನೇ ಕಂತು ಮಾತ್ರ ಬಿಡುಗಡೆಯಾಗಿ, ಎರಡು ಹಾಗೂ ಮೂರನೇ ಕಂತಿನ ಪರಿಹಾರ ಈ ವರೆಗೂ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ 1.2 ಲಕ್ಷ ರೂ. ಪರಿಹಾರ ಹಾಗೂ ಮನೆ ನೀಡುವ ನಿರ್ಧಾರ ಮಾಡಿದೆ ಎಂದು ಸ್ಪಷ್ಟ ಪಡಿಸಿದರು.

ಜನರ ಸಹಕಾರ ವಿದ್ದರೆ ಪದೇ ಪದೇ ಮುಳುಗಡೆಯಾಗುವ ಹಳ್ಳಿಗಳ ಸ್ಥಳಾಂತರ ಮಾಡುವ ಮೂಲಕ ಶಾಶ್ವತ ಪರಿಹಾರ ಒದಗಿಸಲು ಚಿಂತನೆ ಮಾಡಲಾಗುವುದು ಎಂದು ತಿಳಿಸಿದರು.

ಪರಿಹಾರ ಕೆಲಸ ಪ್ರಾರಂಭ:
ರಾಜ್ಯದ ಹಲವೆಡೆ ಮಳೆಯಿಂದ ಹಾನಿಯಾಗಿದೆ. ಎಲ್ಲ ಕಡೆ ಪರಿಹಾರ ಕೆಲಸಗಳನ್ನು ಪ್ರಾರಂಭಿಸಲಾಗಿದೆ ಎಂದರು. ಬೆಳಗಾವಿಯಲ್ಲಿ ಕಳೆದ 42 ದಿನದಿಂದ ನಿರಂತರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿಗಳಿಗೂ ರಜೆ ಘೋಷಣೆ ಮಾಡುವಂತೆ ಸೂಚಿಸಲಾಗಿದೆ.

ಮುಂದಿನ ವಾರ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಇದಕ್ಕಾಗಿ ಕಂದಾಯ, ವಿಪತ್ತು ನಿರ್ವಹಣೆ, ಅರಣ್ಯ ಇಲಾಖೆ, ಇಂಧನ, ನೀರಾವರಿ ಸೇರಿದಂತೆ ಎಲ್ಲ ಇಲಾಖೆಗಳು ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ ಎಂದರು.ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌, ಬೆಳಗಾವಿ ಜಿಲ್ಲೆಯ ಶಾಸಕರು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!