ಹೊಸದಿಗಂತ ವರದಿ ಮಡಿಕೇರಿ:
ಹಾರಂಗಿ ಜಲಾನಯನ ವ್ಯಾಪ್ತಿಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತಿದ್ದು, ಜಲಾಶಯಕ್ಕೆ ಒಳಹರಿವಿನ ಪ್ರಮಾಣವೂ ಅಧಿಕವಾಗುತ್ತಿದೆ. ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಂಭವವಿದೆ.
ಜಲಾಶಯದ ನೀರಿನ ಪ್ರಮಾಣ ಶೀಘ್ರವೇ ಗರಿಷ್ಠ ಮಟ್ಟ ತಲುಪುವುದರಿಂದ ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುವುದರಿಂದ ಕಾವೇರಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡೂ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿಪಾಸ್ತಿ ಹಾಗೂ ಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾರಂಗಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅವರು ಕೋರಿದ್ದಾರೆ.