ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಭಾರೀ ಮಳೆಗೆ ಎರಡೂ ರಾಜ್ಯಗಳ 27 ಜನರು ಸಾವನ್ನಪ್ಪಿದ್ದಾರೆ. ಮೂವರು ಕಣ್ಮರೆಯಾಗಿದ್ದು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ಶಂಕಿಸಲಾಗಿದೆ.
ಮಳೆಯಿಂದಾಗಿ ಸಾವನ್ನಪ್ಪಿದವರಲ್ಲಿ 12 ಮಂದಿ ಆಂಧ್ರಪ್ರದೇಶದವರು ಮತ್ತು 15 ಮಂದಿ ತೆಲಂಗಾಣದವರು. ಭಾರೀ ಮಳೆಯಿಂದಾಗಿ ರಸ್ತೆಗಳು ಜಲಾವೃತವಾಗಿದ್ದು, ಕೆಲವೆಡೆ ಸಂಪರ್ಕ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಇದರಿಂದ ಹಲವೆಡೆ ರಕ್ಷಣಾ ಕಾರ್ಯಾಚರಣೆ ಸವಾಲಾಗಿ ಪರಿಣಮಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
97 ರೈಲುಗಳನ್ನು ಮರುನಿರ್ದೇಶಿಸಲಾಗಿದೆ. ಜತೆಗೆ 140 ರೈಲುಗಳನ್ನು ರದ್ದುಗೊಳಿಸಲಾಗಿದೆ. ಈ ಕಾರಣಕ್ಕಾಗಿ 6,000 ಪ್ರಯಾಣಿಕರು ನಿಲ್ದಾಣಗಳಲ್ಲಿ ಸಿಲುಕಿಕೊಂಡಿದ್ದಾರೆ.