ಅಸ್ಸಾಂನಲ್ಲಿ ಪ್ರವಾಹ: ಸಾವಿನ ಸಂಖ್ಯೆ 24 ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಅಸ್ಸಾಂನಲ್ಲಿ ಉಂಟಾದ ಪ್ರವಾಹದಿಂದಾಗಿ ಮತ್ತೆ ಆರು ಜನರು ಸಾವನ್ನಪ್ಪಿದ್ದು, ಒಟ್ಟಾರೆ ಸಾವಿನ ಸಂಖ್ಯೆ 24 ಕ್ಕೆ ಏರಿಕೆಯಾಗಿದೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಎಸ್‌ಡಿಎಂಎ) ಇಂದು ತಿಳಿಸಿದೆ.
ಇದರಲ್ಲಿ 19 ಜನರು ಪ್ರವಾಹದಲ್ಲಿ ಮತ್ತು ಐವರು ಭೂಕುಸಿತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪ್ರಾಧಿಕಾರ ತಿಳಿಸಿದೆ.
ಎಎಸ್‌ಡಿಎಂಎ ಬಿಡುಗಡೆ ಮಾಡಿದ ವರದದಿ ಪ್ರಕಾರ, ರಾಜ್ಯದ 22 ಜಿಲ್ಲೆಗಳ 2,095 ಗ್ರಾಮಗಳಲ್ಲಿ 1,41,050 ಮಕ್ಕಳು ಸೇರಿದಂತೆ ಒಟ್ಟು 7,19,425 ಜನರು ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿಪತ್ತು ಪ್ರತಿಕ್ರಿಯೆ ಪಡೆಗಳು ಮತ್ತು ಸ್ವಯಂಸೇವಕರ ಸಹಾಯದಿಂದ ಒಟ್ಟು 26,489 ಜನರನ್ನು ಸ್ಥಳಾಂತರಿಸಲಾಗಿದೆ. ಎಲ್ಲಾ ಪೀಡಿತ ಪ್ರದೇಶಗಳಲ್ಲಿ 624 ಪರಿಹಾರ ಶಿಬಿರಗಳು ಮತ್ತು 729 ಪರಿಹಾರ ವಿತರಣಾ ಕೇಂದ್ರಗಳನ್ನು ತೆರೆಯಲಾಗಿದೆ. ಒಟ್ಟು 1,32,717 ಮಂದಿ ಪರಿಹಾರ ಶಿಬಿರಗಳಲ್ಲಿ ತಂಗಿದ್ದಾರೆ. ಸುಮಾರು 1,30,596.12 ಹೆಕ್ಟೇರ್ ಬೆಳೆ ಹಾನಿಯಾಗಿದೆ ಎನ್ನಲಾಗುತ್ತಿದೆ.
ಅಸ್ಸಾಂ ರೈಫಲ್ಸ್, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್), ಭಾರತೀಯ ಸೇನೆ, ನಾಗರಿಕ ರಕ್ಷಣೆ, ಅರೆಸೇನಾ ಪಡೆಗಳು, ಭಾರತೀಯ ವಾಯುಪಡೆ, ಜಿಲ್ಲಾಡಳಿತಗಳೊಂದಿಗೆ ಪೀಡಿತ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಸ್ಥಳಾಂತರಿಸುವಿಕೆ ಜಿಲ್ಲಾಡಳಿತಕ್ಕೆ ಸಹಾಯ ಮಾಡುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!