ಅರಬ್ ರಾಷ್ಟ್ರದಲ್ಲಿ ಪ್ರವಾಹ: ಸದ್ಯಕ್ಕೆ ಪ್ರಯಾಣ ಮುಂದೂಡಿ ಎಂದ ಭಾರತೀಯ ರಾಯಭಾರ ಕಚೇರಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವರುಣನ ಅಬ್ಬರಕ್ಕೆ ಅರಬ್ ರಾಷ್ಟ್ರದಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಪರಿಸ್ಥಿತಿ ಸಹಜ ಸ್ಥಿತಿಗೆ ಬರುವವರೆಗೆ ಅನಿವಾರ್ಯವಲ್ಲದ ಪ್ರಯಾಣವನ್ನು ಮುಂದೂಡುವಂತೆ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವ ಅಥವಾ ಅದರ ಮೂಲಕ ಹಾದು ಹೋಗುವ ವಿಮಾನಗಳಲ್ಲಿ ಪ್ರಯಾಣಿಸುವ ಭಾರತೀಯರಿಗೆ ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಶುಕ್ರವಾರ ಸಲಹೆ ನೀಡಿದೆ.

ದುಬೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಯುಎಇ ಅಧಿಕಾರಿಗಳು ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಸಾಮಾನ್ಯ ಸ್ಥಿತಿಗೆ ತರಲು ಹಗಲಿರುಳು ಶ್ರಮಿಸುತ್ತಿದ್ದಾರೆ.

ಹೀಗಾಗಿ ವಿಮಾನಗಳ ನಿರ್ಗಮನ ದಿನಾಂಕ ಮತ್ತು ಸಮಯದ ಕುರಿತು ಆಯಾ ವಿಮಾನಯಾನ ಸಂಸ್ಥೆಗಳಿಂದ ಅಂತಿಮ ದೃಢೀಕರಣದ ನಂತರವೇ ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಆಗಮಿಸಬೇಕು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಜೊತೆಗೆ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಒಳಬರುವ ವಿಮಾನಗಳ ಸಂಖ್ಯೆಯನ್ನು ತಾತ್ಕಾಲಿಕವಾಗಿ ಸೀಮಿತಗೊಳಿಸಿದೆ ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

‘ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವ ಅಥವಾ ಆ ಮಾರ್ಗದಲ್ಲಿ ಹಾದು ಹೋಗುವ ವಿಮಾನಗಳಲ್ಲಿ ಪ್ರಯಾಣಿಸುವ ಭಾರತೀಯ ಪ್ರಯಾಣಿಕರು ವಿಮಾನಗಳ ಕಾರ್ಯಾಚರಣೆ ಸಹಜ ಸ್ಥಿತಿಗೆ ಮರಳುವವರೆಗೆ ಅನಿವಾರ್ಯವಲ್ಲದ ಪ್ರಯಾಣವನ್ನು ಮರುಹೊಂದಿಸಲು ಸೂಚಿಸಲಾಗಿದೆ’ ಎಂದು ರಾಯಭಾರ ಕಚೇರಿ ಪ್ರಕಟಣೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!