ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಭೀತಿ: ಬಸವಸಾಗರದಿಂದ ಕೃಷ್ಣೆಗೆ 1.40 ಲಕ್ಷ ಕ್ಯೂಸೆಕ್ ನೀರು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸ ದಿಗಂತ ವರದಿ,ಯಾದಗಿರಿ:

ಮಹಾರಾಷ್ಟ್ರ ಸೇರಿ ಉತ್ತರ ಕರ್ನಾಟಕದ ಮಲಪ್ರಭಾ-ಘಟಪ್ರಭಾ ಹಾಗೂ ಸ್ಥಳೀಯವಾಗಿ ಮತ್ತೆ ಸುರಿಯುತ್ತಿರುವ ಭಾರಿ ಮಳೆಯಿಂದ ಆಲಿಮಟ್ಟಿ ಮತ್ತು ಬಸವಸಾಗರ ಜಲಾಶಯಕ್ಕೆ ಒಳ ಹರಿವು ಹೆಚ್ಚಳವಾಗುತ್ತಿದೆ. ಇದರ ಪ್ರಯುಕ್ತ ನಾರಾಯಣಪುರ ಬಸವಸಾಗರ ಜಲಾಶಯದ 20 ಕ್ರ‍್ರೆಷ್ಟ್ಗೇಟ್ ತೆರೆದು 1.40 ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣೆಗೆ ಹರಿಸಲಾಗುತ್ತಿದೆ ಜಿಲ್ಲೆಯಲ್ಲಿ ಪ್ರವಾಹದ ಭೀತಿ ಜನರಲ್ಲಿ ಹುಟ್ಟಿದೆ.
ಮಹಾರಾಷ್ಟ್ರದ ಮಹಾಬಲೇಶ್ವರ, ಮುಂಬೈ, ಸಾಂಗ್ಲಿ, ಮಿರಜ ಪಶ್ಚಿಮ ಘಟ್ಟ ಅಲ್ಲದೇ ರಾಜ್ಯದ ಹುಬ್ಬಳ್ಳಿ, ಧಾರವಾಡ, ಮಲಪ್ರಭಾ-ಘಟಪ್ರಭಾ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿರುವ ನಿಟ್ಟಿನಲ್ಲಿ ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತ್ರಿ ಜಲಾಶಯಕ್ಕೆ ನೀರು ಹರಿದು ಬರುತ್ತಿದ್ದು ನೀರಿನ ಒಳ ಹರಿವು ಹೆಚ್ಚಾಗಿದೆ. ಇದರಿಂದ ನಾರಾಯಣಪುರದ ಬಸವಸಾಗರ ಜಲಾಶಯವು ಕೂಡ ಭರ್ತಿಯಾಗಿ ನೀರಿನ ಸಂಗ್ರಹ ಗರಿಷ್ಠ ಮಟ್ಟ ತಲುಪಿದ್ದು ಜಲಾಶಯದ 20 ಮುಖ್ಯ ಕ್ರೆಷ್ಟ್ಗೇಟುಗಳನ್ನು ತೆರೆಯುವ ಮೂಲಕ 1.40 ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣೆಗೆ ಬಿಡಲಾಗಿದೆ.
ಸದ್ಯ ಕೃಷ್ಣೆಯ ಒಡಲು ಭೋರ್ಗರೆಯುತ್ತಿದ್ದು ಪ್ರವಾಹ ಭೀತಿ ಉಂಟಾಗಿದ್ದು ಕೃಷ್ಣಾ ತೀರದ ಬಂಡೋಳ್ಳಿ, ತಿಂಥಣಿ, ಬೆಂಚಿಗಡ್ಡಿ, ದೇವರಗಡ್ಡಿ, ಮೇಲಿನಗಡ್ಡಿ, ನೀಲಕಂಠ ರಾಯನಗಡ್ಡಿ ಸೇರಿ ಇತರೆ ಗ್ರಾಮಗಳ ಜನ-ಜಾನುವಾರು ನದಿಗೆ ಇಳಿಯದಂತೆ ಖಡಕ್ ಸೂಚನೆ ಹೊರಡಿಸಲಾಗಿದೆ. ಇದರಿಂದ ಜತೆಗೆ ಜನತೆಯಲ್ಲಿ ಆತಂಕ ಶುರುವಾಗಿದೆ. ಕಳೆದ ಸಾಲಿನ ಪ್ರವಾಹ ಮಾಸುವ ಮುನ್ನವೇ ಸದ್ಯ ಭಾರಿ ನೀರು ನದಿಗೆ ಎಂಬ ಸುದ್ದಿ ಕೇಳಿ ನದಿ ಪಾತ್ರದ ಜನತೆಯ ನಿದ್ದೆ ಗೆಡಿಸಿದೆ.
492.252 ಮೀ ಗರಿಷ್ಠ ನೀರಿನ ಸಂಗ್ರಹವಿರುವ ಬಸವಸಾಗರ ಜಲಾಶಯದಲ್ಲಿ ಸದ್ಯ 491.13 ಮೀ ತಲುಪಿದ್ದು 30.74 ಟಿಎಂಸಿ ನೀರಿನ ಸಂಗ್ರಹವಿದೆ, ಜಲಾಶಯದ ನೀರಿನ ಸಂಗ್ರಹ ಮಟ್ಟ ಕಾಯ್ದುಕೊಂಡು ಜಲಾಶಯದ ಗೇಟ್‌ಗಳ ಮೂಲಕ 20 ಗೇಟ್ ತೆರೆಯುವ ಮೂಲಕ 1.40 ಲಕ್ಷ ಕ್ಯೂಸೆಕ್ ನೀರು ನದಿಗೆ ಹರಿಸಲಾಗುತ್ತಿದೆ. ಎರಡು ದಿನಗಳ ಕಾಲ ಮುಂದುವರೆಯುವ ಸಾಧ್ಯತೆ ಇದೆ, ಇನ್ನೂ ಒಳ ಹರಿವು ಹೆಚ್ಚಳ ಆದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನದಿಎ ನೀರು ಬಿಡುವ ಸಾಧ್ಯತೆ ಇದೆ ಎಂದು ನಿಗಮದ ಅಧಿಕಾರಿಗಳಿಂದ ತಿಳಿದು ಬಂದಿದೆ.
ನಾರಾಯಣಪುರ ಜಲಾಶಯದಿಂದ ರಾತ್ರಿ 9.೦೦ ಗಂಟೆಗೆ 28 ಗೇಟಗಳ ಮೂಲಕ 161500 ಕ್ಯುಸೆಕ ನೀರು ಕೃಷ್ಣಾ ನದಿಗೆ ಬಿಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss