Thursday, July 7, 2022

Latest Posts

ಅಸ್ಸಾಂನಲ್ಲಿ ಪ್ರವಾಹದ ಅಬ್ಬರ: ಮೃತರ ಸಂಖ್ಯೆ 18ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಅಸ್ಸಾಂನಲ್ಲಿ ಮಳೆ ಹಾಗೂ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮತ್ತಷ್ಟು ಪ್ರದೇಶಗಳಿಗೆ ನೀರು ನುಗ್ಗತೊಡಗಿದೆ.ಭಾನುವಾರ ಮತ್ತೆ ನಾಲ್ವರು ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 18ಕ್ಕೇರಿದೆ.
ಒಂದೆಡೆ ಭಾರೀ ಮಳೆಯಾಗುತ್ತಿದ್ದು, ಇತ್ತ ಭಾರತೀಯ ವಾಯುಪಡೆಯು ಹಗಲುರಾತ್ರಿಯೆನ್ನದೇ ರಕ್ಷಣಾ ಕಾರ್ಯ ನಡೆಸುತ್ತಿದೆ.ಪ್ರವಾಹದಿಂದಾಗಿ ಸಂಪರ್ಕ ಕಡಿತಗೊಂಡಿರುವ ಪ್ರತಿಯೊಂದು ಗ್ರಾಮಕ್ಕೂ ತೆರಳಿ, ಜನರನ್ನು ಏರ್‌ಲಿಫ್ಟ್ ಮಾಡುವ ಕೆಲಸವನ್ನು ವಾಯುಪಡೆ ಹೆಲಿಕಾಪ್ಟರ್‌ಗಳು ಮಾಡುತ್ತಿವೆ. ಜತೆಗೆ, ಆಹಾರದ ಪ್ಯಾಕೆಟ್‌ಗಳು, ಪರಿಹಾರ ಸಾಮಗ್ರಿಗಳನ್ನು ತಲುಪಿಸುತ್ತಿವೆ.
ರಕ್ಷಣೆ ಮತ್ತು ಪರಿಹಾರ ಕಾರ್ಯಕ್ಕಾಗಿ ವಾಯುಪಡೆಯು ಎಎನ್‌-32 ಸಾರಿಗೆ ವಿಮಾನ, 2 ಎಂಐ-17 ಹೆಲಿಕಾಪ್ಟರ್‌ಗಳು, ಒಂದು ಚಿನೂಕ್‌ ಕಾಪ್ಟರ್‌, ಒಂದು ಎಎಲ್‌ಎಚ್‌ ಧ್ರುವ ಕಾಪ್ಟರ್‌ಗಳನ್ನು ನಿಯೋಜಿಸಿದೆ. ಶನಿವಾರ ಡಿಟೋಕೆcರಾ ರೈಲು ನಿಲ್ದಾಣದಲ್ಲಿ ಸಿಲುಕಿದ್ದ 119 ಮಂದಿಯನ್ನು ಎಂಐ-17 ಕಾಪ್ಟರ್‌ಗಳು ರಕ್ಷಣೆ ಮಾಡಿವೆ.
ಧಾರಾಕಾರ ಮಳೆಯಿಂದಾಗಿ ಭೂಕುಸಿತ, ಹಳಿಗಳಿಗೆ ಹಾನಿ ಸಂಭವಿಸಿದ ಕಾರಣ ಕಳೆದೊಂದು ವಾರದಿಂದ ರೈಲು ಸೇವೆ ವ್ಯತ್ಯಯವಾಗಿದೆ. ಭಾನುವಾರವೂ 11 ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss