Wednesday, September 3, 2025

ಪಠಾಣ್‌ಕೋಟ್‌ನಲ್ಲಿ ಪ್ರವಾಹ: ಸಿಲುಕಿಕೊಂಡಿದ್ದ ಸಿಆರ್‌ಪಿಎಫ್‌ ಸಿಬ್ಬಂದಿ ರಕ್ಷಿಸಿದ ಸೇನಾ ಹೆಲಿಕಾಪ್ಟರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಂಜಾಬ್‌ನ ಪಠಾಣ್‌ಕೋಟ್ ಜಿಲ್ಲೆಯ ಮಾಧೋಪುರ್ ಹೆಡ್‌ವರ್ಕ್ಸ್ ಬಳಿ ಬುಧವಾರ ಭಾರತೀಯ ಸೇನಾ ಹೆಲಿಕಾಪ್ಟರ್‌ ರಕ್ಷಣಾ ಕಾರ್ಯಾಚರಣೆ ನಡೆಸಿತು. ಪ್ರವಾಹದಲ್ಲಿ ಸಿಲುಕಿಕೊಂಡಿದ್ದ 22 ಸಿಆರ್‌ಪಿಎಫ್ ಸಿಬ್ಬಂದಿ ಮತ್ತು ಮೂವರು ನಾಗರಿಕರನ್ನು ರಕ್ಷಿಸಿತು.

ಸವಾಲಿನ ಹವಾಮಾನದ ಹೊರತಾಗಿಯೂ ರಕ್ಷಣಾ ಕಾರ್ಯ ಕೈಗೊಳ್ಳಲು ಬುಧವಾರ ಬೆಳಗ್ಗೆ 6 ಗಂಟೆಗೆ ಹೆಲಿಕಾಪ್ಟರ್‌ಗಳನ್ನು ಕಳುಹಿಸಲಾಯಿತು. ಪ್ರವಾಹದಲ್ಲಿ ಸಿಲುಕಿಕೊಂಡಿದ್ದ ಎಲ್ಲರನ್ನೂ ಯಶಸ್ವಿಯಾಗಿ ಸ್ಥಳಾಂತರಿಸಿ, ಅವರನ್ನು ಸುರಕ್ಷಿತ ಸ್ಥಳಕ್ಕೆ ಕರೆತರಲಾಗಿದೆ ಎಂದು ಸೇನೆಯು ತಿಳಿಸಿದೆ.

ಸ್ಥಳಾಂತರಿಸಿದ ಸ್ವಲ್ಪ ಸಮಯದ ನಂತರ ಸಿಬ್ಬಂದಿ ಆಶ್ರಯ ಪಡೆದಿದ್ದ ಕಟ್ಟಡ ಕುಸಿದು ಬಿದ್ದಿದೆ. ಸಮಯೋಚಿತವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರಿಂದ ಎಲ್ಲರೂ ಬಚಾವ್‌ ಆಗಿದ್ದಾರೆ.

ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಸಟ್ಲೆಜ್, ಬಿಯಾಸ್, ಉಜ್ ಮತ್ತು ರಾವಿ ನದಿಗಳು ಉಕ್ಕಿ ಹರಿಯುತ್ತಿವೆ. ಪಠಾಣ್‌ಕೋಟ್, ಹೋಶಿಯಾರ್‌ಪುರ, ಗುರುದಾಸ್ಪುರ್, ಕಪುರ್ತಲಾ, ಫಜಿಲ್ಕಾ, ತರಣ್ ತರಣ್ ಮತ್ತು ಫಿರೋಜ್‌ಪುರ ಸೇರಿದಂತೆ ಪಂಜಾಬ್ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ.

ಇದನ್ನೂ ಓದಿ