March 23, 2026
Monday, March 23, 2026
spot_img

ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ: ವಿವಿಧ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

2026 ಗಣರಾಜ್ಯೋತ್ಸವ ಪ್ರಯುಕ್ತ ತೋಟಗಾರಿಕೆ ಇಲಾಖೆಯಿಂದ ಲಾಲ್ ಬಾಗ್ ನಲ್ಲಿ ಫಲಪುಷ್ಪ’ ಪ್ರದರ್ಶನವನ್ನು ಆಯೋಜಿಸಲಾಗುತ್ತಿದ್ದು, ವಿವಿಧ ಸ್ಪರ್ಧೆಗಳಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಬಾರಿ ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕರಾದ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ರವರ ಜೀವನ ಚಿತ್ರ ಬಿಂಬಿಸುವ 219ನೇ ಫಲಪುಷ್ಪ ಪ್ರದರ್ಶನವನ್ನು ಇದೇ ಜನವರಿ 15 ರಿಂದ 26 ರವರೆಗೆ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಆಯೋಜಿಸಲಾಗುತ್ತಿದೆ.

ಪ್ರದರ್ಶನದ ಪ್ರಯುಕ್ತ ವಿವಿಧ ಉದ್ಯಾನವನಗಳು, ತೋಟಗಳು, ತಾರಸಿ, ಕೈತೋಟಗಳು, ತರಕಾರಿ, ಔಷಧಿ ಗಿಡಗಳು, ಕುಂಡಗಳಲ್ಲಿ ಬೆಳೆದ ವಿವಿಧ ಜಾತಿಯ ಗಿಡಗಳು, ಇಕೆಬಾನ, ಜಾನೂರ್, ಥಾಯ್ ಆರ್ಟ್ ಮತ್ತು ಪೂರಕ ಕಲೆಗಳಿಗೆ ಸಂಬಂಧಿಸಿದಂತೆ ಸ್ಪರ್ಧೆಗಳನ್ನು 2026 ರ ಜನವರಿ 17 ರಂದು ಹಮ್ಮಿಕೊಳ್ಳಲಾಗಿದೆ.

ಇಕೆಬಾನ, ಜಾನೂರ್, ಥಾಯ್ ಆರ್ಟ್ ಮತ್ತು ಇತರೆ ಪೂರಕ ಕಲೆಗಳಿಗೆ ಸಂಬಂಧಿಸಿದಂತೆ ಆಸಕ್ತರು, ಪ್ರದರ್ಶಕರಿಂದ 2026 ಜನವರಿ 5 ರಿಂದ 12 ರವರೆಗೆ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಲಾಲ್ ಬಾಗ್ ನ ತೋಟಗಾರಿಕಾ ಅಪರ ನಿರ್ದೇಶಕರ ಕಚೇರಿಯಲ್ಲಿ ಕಚೇರಿಯಲ್ಲಿ ಅರ್ಜಿಗಳನ್ನು ಬೆಳಿಗ್ಗೆ 10 ರಿಂದ 5 ಗಂಟೆಯವರೆಗೆ ವಿತರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ತಾರಕೇಶ್ವರಿ ಕೆ.ಆರ್ 8497048733 ಹಾಗೂ ಪುಷ್ಪಲತಾ ಎಂ. ಅವರನ್ನು 8904592122 ಮೂಲಕ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !