ಚಿಕ್ಕಣ್ಣ ಆರೋಗ್ಯದಲ್ಲಿ ಏರುಪೇರು?: ಈ ಕುರಿತು ಹಾಸ್ಯನಟ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕನ್ನಡ ಚಿತ್ರರಂಗದ ಹಾಸ್ಯನಟ ಚಿಕ್ಕಣ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆ ದಾಖಲಿಸಲಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದೀಗ ಈ ಬಗ್ಗೆ ಚಿಕ್ಕಣ್ಣ ಸ್ಪಷ್ಟನೆ ನೀಡಿದ್ದಾರೆ.
‘ನನಗೆ ಏನು ಆಗಿಲ್ಲ… ಆರೋಗ್ಯ ಸರಿಯಾಗಿದೆ. ಸದ್ಯ ‘ಉಪಾಧ್ಯಕ್ಷ’ ಸಿನಿಮಾ ಶೂಟಿಂಗ್​ನಲ್ಲಿ ಇದ್ದೇನೆ. ಯಾರೋ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಥ್ಯಾಂಕ್ಸ್​ ಕಣ್ರಪ್ಪ ನಿಮಗೆ’ ಎಂದು ಹಾಸ್ಯಮಯವಾಗಿಯೇ ಪ್ರತಿಕ್ರಿಯಿಸಿದ್ದಾರೆ. ಚಿಕ್ಕಣ್ಣರ ಮಾತು ಕೇಳಿದ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
ಚಿಕ್ಕಣ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರನ್ನು ಆಸ್ಪತ್ರೆ ದಾಖಲಿಸಲಾಗಿದೆ’ ಎಂಬ ಸುಳ್ಳು ಸುದ್ದಿಯನ್ನು ಯಾರೋ ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟಿದ್ದರು. ಈ ಸುದ್ದಿ ಕೇಳಿ ಚಿಕ್ಕಣ್ಣರ ಅಭಿಮಾನಿಗಳ ಮನದಲ್ಲಿ ಆತಂಕ ಮೂಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!