ಇಂದು ಜಿ-20ಸಭೆ: ಸೌದಿ, ಚೀನಾ, ಇಂಡೋನೇಷ್ಯಾ, ಸ್ಪೇನ್ ವಿದೇಶಾಂಗ ಸಚಿವರು ಭಾರತಕ್ಕೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತ ಜಿ-20 ಅಧ್ಯಕ್ಷ ಸ್ಥಾನ ವಹಿಸಿಕೊಂಡಾಗಿನಿಂದ ಅದರ ಯಶಸ್ಸಿನ ಕಡೆಗೆ ಮುನ್ನುಗ್ಗುತ್ತಿದೆ. ಇದರ ಭಾಗವಾಗಿ ಅನೇಕ ಸಭೆಯಗಳನ್ನು ಆಯೋಜಿಸಿದ್ದು, ಇಂದು ಕೂಡ ವಿದೇಶಾಂಗ ಸಚಿವರ ಸಭೆ ನಡೆಯಲಿದೆ. ಅದಕ್ಕಾಗಿ ಸೌದಿ ಅರೇಬಿಯಾ, ಚೀನಾ, ಇಂಡೋನೇಷ್ಯಾ, ಸ್ಪೇನ್ ಮತ್ತು ಕ್ರೊಯೇಷಿಯಾದ ವಿದೇಶಾಂಗ ಸಚಿವರು ಗುರುವಾರ ಭಾರತಕ್ಕೆ ಆಗಮಿಸಿದ್ದು, ನವದೆಹಲಿಯಲ್ಲಿ ನಡೆಯಲಿರುವ ಜಿ20 ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸೌದಿ ಅರೇಬಿಯಾದ ವಿದೇಶಾಂಗ ಸಚಿವ ಪ್ರಿನ್ಸ್ ಫೈಸಲ್ ಬಿನ್ ಫರ್ಹಾನ್, ಚೀನಾದ ವಿದೇಶಾಂಗ ಸಚಿವ ಕ್ವಿನ್ ಗ್ಯಾಂಗ್, ಇಂಡೋನೇಷ್ಯಾ ವಿದೇಶಾಂಗ ಸಚಿವ ರೆಟ್ನೋ ಮರ್ಸುಡಿ, ಸ್ಪೇನ್ ವಿದೇಶಾಂಗ ಸಚಿವ ಜೋಸ್ ಮ್ಯಾನುಯೆಲ್ ಅಲ್ಬರೆಸ್ ಬ್ಯೂನೊ ಮತ್ತು ಕ್ರೊಯೇಷಿಯಾದ ವಿದೇಶಾಂಗ ಸಚಿವ ಗೋರ್ಡಾನ್ ಗ್ರ್ಲಿಕ್ ರಾಡ್‌ಮನ್ ಗುರುವಾರ ಭಾರತಕ್ಕೆ ಬಂದಿಳಿದಿದ್ದಾರೆ.

ಯುಎಇಯ ವಿದೇಶಾಂಗ ವ್ಯವಹಾರಗಳು ಮತ್ತು ಅಂತರಾಷ್ಟ್ರೀಯ ಸಹಕಾರ ಸಚಿವ ಶೇಖ್ ಅಬ್ದುಲ್ಲಾ ಬಿನ್ ಝಾಯೆದ್ ಅಲ್ ನಹ್ಯಾನ್, ಈಜಿಪ್ಟ್ ವಿದೇಶಾಂಗ ಸಚಿವ ಸಮೇಹ್ ಶೌಕ್ರಿ ಮತ್ತು ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಅವರು ಜಿ20ಎಫ್‌ಎಂಎಂನಲ್ಲಿ ಭಾಗವಹಿಸಲು ಬುಧವಾರವೇ ಭಾರತಕ್ಕೆ ಬಂದಿದ್ದಾರೆ.

ಇದಕ್ಕೂ ಕೆನಡಾ, ಅರ್ಜೆಂಟೀನಾ, ನೆದರ್‌ಲ್ಯಾಂಡ್, ಸಿಂಗಾಪುರ ಮತ್ತು ಬಾಂಗ್ಲಾದೇಶದ ವಿದೇಶಾಂಗ ಸಚಿವರು ಸಭೆಗೆ ದೆಹಲಿಗೆ ಆಗಮಿಸಿದ್ದರು. G20FMM ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆಯಲಿದ್ದು, ಸುಮಾರು 40 ನಿಯೋಗಗಳು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಇದು ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಎರಡನೇ ಸಚಿವರ ಸಭೆಯಾಗಿದೆ. ಹಣಕಾಸು ಸಚಿವರು ಮತ್ತು ಕೇಂದ್ರ ಬ್ಯಾಂಕ್ ಗವರ್ನರ್‌ಗಳ ಮೊದಲ ಸಚಿವರ ಸಭೆ ಬೆಂಗಳೂರಿನಲ್ಲಿ ನಡೆಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!