Sunday, June 4, 2023

Latest Posts

ಜನರ ಆರೋಗ್ಯದ ಬಗ್ಗೆ ಗಮನಹರಿಸಿ ಪಾದಯಾತ್ರೆ ತಾತ್ಕಾಲಿಕ ಸ್ಥಗಿತ: ಡಿಕೆಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನ್ಯಾಯಾಲಯಕ್ಕೆ ತಲೆಬಾಗಿ, ಹೈಕಮಾಂಡ್ ಮಾತಿಗೆ ಬೆಲೆಕೊಟ್ಟು, ಜನರ ಆರೋಗ್ಯದ ದೃಷ್ಟಿಯಿಂದ ಪಾದಯಾತ್ರೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದೇವೆ. ಕೊರೋನಾ ಕಡಿಮೆ ಆದಮೇಲೆ ಮತ್ತೆ ಪಾದಯಾತ್ರೆ ಮುಂದುವರಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ರಾಮನಗರದಿಂದಲೇ ಮತ್ತೆ ಪಾದಯಾತ್ರೆ ಮಾಡುತ್ತೇವೆ. ಮತ್ತಷ್ಟು ಹುರುಪಿನಿಂದ ಪಾದಯಾತ್ರೆ ನಡೆಸುತ್ತೇವೆ. ಕೊರೋನಾ ಸೋಂಕು ಹರಡಿ ಜನರಿಗೆ ತೊಂದರೆಯಾಗಬಾರದು ಎಂದು ಪಾದಯಾತ್ರೆ ನಿಲ್ಲಿಸಿದ್ದೇವೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!