ಸಿಲಿಕಾನ್ ಸಿಟಿಯಲ್ಲಿ ಮಂಜು ಕವಿದ ವಾತಾವರಣ: ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಲಿಕಾನ್ ಸಿಟಿಯಲ್ಲಿ ಬೆಳಗ್ಗೆಯಿಂದಲೇ ಮಂಜು ಮುಸುಕಿದ ವಾತಾವರಣವಿದ್ದು, ವಿಮಾನಗಳ ಹಾರಾಟದಲ್ಲಿ ವ್ಯತ್ಯಾಸ ಕಂಡು ಬರುತ್ತಿದೆ.

ಕಳಪೆ ಗೋಚರತೆಯಿಂದಾಗಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ಈ ಬಗ್ಗೆ ಎಕ್ಸ್ ಪೋಸ್ಟ್ ಮೂಲಕ ಇಂಡಿಗೋ ಸಂಸ್ಥೆ ಮಾಹಿತಿ ನೀಡಿದೆ.

ದೆಹಲಿಯಲ್ಲಿ ದಟ್ಟವಾದ ಮಂಜಿನಿಂದಾಗಿ ದೇಶದ ಇತರ ನಗರಗಳಿಗೆ ಸಂಪರ್ಕಿಸುವ 200 ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಲಾಗಿದೆ.

ಬೆಂಗಳೂರಿನಲ್ಲಿ ಮಂಜಿನಿಂದಾಗಿ ಗೋಚರತೆ ಕಡಿಮೆಯಾಗಿದೆ. ಇದು ವಿಮಾನ ಯೋಜನೆಯಲ್ಲಿ ಬದಲಾವಣೆಗಳಿಗೆ ಕಾರಣವಾಗಬಹುದು. ವಿಮಾನ ನಿಲ್ದಾಣಕ್ಕೆ ಹೋಗುವ ಮೊದಲು ತಮ್ಮ ಫ್ಲೈಟ್ ಸ್ಥಿತಿಯನ್ನು ನವೀಕರಿಸಲು ಇಂಡಿಗೋ ಪ್ರಯಾಣಿಕರಲ್ಲಿ ಮನವಿ ಮಾಡಿಕೊಂಡಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!