ಉತ್ತರ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಜಾನಪದ ಕಲಾವಿದ ಗುಡ್ಡಪ್ಪ ಆಯ್ಕೆ

ಹೊಸದಿಗಂತ ವರದಿ, ಬನವಾಸಿ:

ಸ್ಥಳೀಯ ಜನತಾ ಕಲೋನಿಯ ಜಾನಪದ ಕಲಾವಿದ ಗುಡ್ಡಪ್ಪ ನೀಲಾಪ್ಪ ಜೋಗಿ ಅವರು 2021-22ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಾಗಿದ್ದಾರೆ.
ಇವರು 30-40ವರ್ಷಗಳ ಕಾಲ ಗ್ರಾಮೀಣ ಭಾಗದಲ್ಲಿ ಜಾನಪದ ಕಲೆ ಮತ್ತು ಜೋಗಿಕಥೆಯ ಮೂಲಕ ಕಲಾ ಸೇವೆ ನೀಡಿದ್ದಾರೆ. ಸರ್ಕಾರದ ಜಾಗೃತಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಏಡ್ಸ್ ರೋಗದ ಜಾಗೃತಿ, ಸ್ವಚ್ಚತಾ ಆಂದೋಲನ ಹಾಗೂ ಆರೋಗ್ಯ ಇಲಾಖೆಯ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿರುವ ಜೋಗಿಯವರು ಆಕಾಶವಾಣಿ ಕಲಾವಿದರಾಗಿಯು ಸೇವೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಮಾತ್ರವಲ್ಲದೆ ದೆಹಲಿ, ಹಿಮಾಚಲ ಪ್ರದೇಶಗಳಲ್ಲಿ ಕಾರ್ಯಕ್ರಮಗಳನ್ನು ನೀಡಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಕಲಾವಿದರಿಗೆ ನೀಡುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಜಾನಪದ ಕಲಾವಿದ ಗುಡ್ಡಪ್ಪ ಜೋಗಿ ಆಯ್ಕೆ ಗೊಂಡಿರುವುದಕ್ಕೆ ಈ ಭಾಗದ ಜನ ಹರ್ಷ ವ್ಯಕ್ತಪಡಿಸಿದ್ದಾರೆ.
ಜಾನಪದ ಕಲಾವಿದನಾಗಿ ಹಲವು ವರ್ಷಗಳಿಂದ ಕಲಾ ಸೇವೆ ಸಲ್ಲಿಸುತ್ತ ಬಂದಿದ್ದೇನೆ. ರಾಜ್ಯ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದೆ ಅದು ಲಭಿಸಲಿಲ್ಲ. ಈಗ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ತಕ್ಕ ಮಟ್ಟಿಗೆ ಸಂತಸ ನೀಡಿದೆ ಎಂದು ಹೊಸದಿಗಂತ ಪತ್ರಿಕೆಗೆ ಗುಡ್ಡಪ್ಪ ಜೋಗಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!