ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಸೋರಗಾವಿ ಬಳಿ ಜನಪದ ಕಲಾವಿದ, ಚಿತ್ರನಟ ಗುರುರಾಜ ಹೊಸಕೋಟೆ ಅವರ ಕಾರು ಅಪಘಾತಕ್ಕೀಡಾಗಿದೆ.
ಎದುರಿಗೆ ಬರುತ್ತಿದ್ದ ವಾಹನವನ್ನು ತಪ್ಪಿಸಲು ಹೋದ ಪರಿಣಾಮ ಕಾರು ರಸ್ತೆ ಬದಿಯಲ್ಲಿದ್ದ ಕಲ್ಲಿಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದಾಗಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.
ಕಾರಿನಲ್ಲಿದ್ದ ಗುರುರಾಜ ಹೊಸಕೋಟೆ ಅವರಿಗೆ ಯಾವುದೇ ಗಾಯಗಳಾಗಿಲ್ಲ, ಯಾರಿಗೂ ಪ್ರಾಣಾಪಾಯವಾಗಿಲ್ಲ. ಸಿಂಧನೂರಿನಿಂದ ಮಹಾಲಿಂಗಪುರಕ್ಕೆ ಹೊರಟಿದ್ದ ಸಂದರ್ಭ ಅಪಘಾತ ಸಂಭವಿಸಿದೆ.