Thursday, March 30, 2023

Latest Posts

ಗಡಿ ಗ್ರಾಮದಲ್ಲಿ ಜಾನಪದ ರಂಗು: ಈಚಲ ಬೀಡಲ್ಲಿ ದೇಸಿ ಸೊಗಡು ಅನಾವರಣ!

ಹೊಸದಿಗಂತ ವರದಿ, ಸೋಮವಾರಪೇಟೆ:

ಜೀವನ ಜಂಜಾಟ, ನಿತ್ಯದ ಸಂಕಷ್ಟದ ನಡುವೆಯೂ ಮನೆನಾಡಿಗರು ತಮ್ಮ ಮೂಲ ಸಂಸ್ಕೃತಿಯನ್ನು ಉಳಿಸಿಕೊಂಡು ಹೋಗುತ್ತಿರುವುದಕ್ಕೆ ಮಹಿಳೆಯರೇ ಮುಖ್ಯ ಕಾರಣ ಎಂದು ಶಾಸಕ ಎಚ್.ಕೆ.ಕುಮಾರಸ್ವಾಮಿ ಹೇಳಿದರು.
ತಾಲೂಕಿನ ಈಚಲಬೀಡು ಗ್ರಾಮದಲ್ಲಿ ಕರ್ನಾಟಕ ಜಾನಪದ ಪರಿಷತ್ತು ಮತ್ತು ಮಲೆನಾಡು ಜಾನಪದ ಉತ್ಸವ ಸಮಿತಿ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ಮಲೆನಾಡು ಜಾನಪದ ಉತ್ಸವವನ್ನು ಮೊರದಲ್ಲಿ ಭತ್ತ ಸುರಿದು ದೀಪ ಬೆಳಗಿಸುವ ಮೂಲಕ ರಾಶಿ ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಇನ್ನೊಬ್ಬರನ್ನು ತಿದ್ದುವ ಬದಲು ನಾವು ತಿದ್ದಿಕೊಳ್ಳೋಣ ಎಂಬ ಸತ್ಯವನ್ನು ಅರಿತು ಜನಪದ ಕಲೆಗಳನ್ನು ಉಳಿಸುವ ಕೆಲಸ ಮಾಡಬೇಕಿದೆ. ತನ್ನದೇ ಶ್ರೇಷ್ಠತೆ, ಪಾವಿತ್ರತೆ ಹೊಂದಿರುವ ಜನಪದ ಕಲೆಗಳಿಗೆ ಸರಿಸಾಟಿ ಇಲ್ಲ. ಅದೇ ನಮ್ಮ ನಾಡಿನ ಮಣ್ಣಿನ ಗುಣ. ನುಡಿ, ನಡೆ ಮಾತ್ರವಲ್ಲದೇ ಕಲಾ ಪ್ರಾವಿಣ್ಯತೆಯಲ್ಲಿ ಜಾನಪದ ಸದಾ ಕಾಲ ಹಸಿರಾಗಿರುತ್ತದೆ. ಆದರೆ ಅವುಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಪ್ರಯತ್ನಗಳು ಹೆಚ್ಚಾಗಬೇಕು ಎಂದರು.
ಕರ್ನಾಟಕ ಜಾನಪದ ಪರಿಷತ್ತು ರಾಜ್ಯಾಧ್ಯಕ್ಷ ಹಿ.ಶಿ.ರಾಮಚಂದೇಗೌಡ, ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ , ಕರ್ನಾಟಕ ಜಾನಪದ ಪರಿಷ್ತ ಜಿಲ್ಲಾಧ್ಯಕ್ಷ ಡಾ. ಹಂಪನಹಳ್ಳಿ ತಿಮ್ಮೇಗೌಡ , ಮನೆಹಳ್ಳಿ ಮಠದ ಶ್ರೀ ಮಹಾಂತ ಶಿವಯೋಗಿ ಸ್ವಾಮೀಜಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ.ಸಂದೇಶ್, ಕಲಾವಿದ ಮೇಟಿಕೆರೆ ಹಿರಿಯಣ್ಣ, ಮಲೆನಾಡು ಜಾನಪದ ಉತ್ಸವ ಸಮಿತಿ ಅಧ್ಯಕ್ಷ ಆರ್.ಪಿ. ಲಕ್ಷ್ಮಣ್, ಈಚಲಬೀಡು ಗ್ರಾಮಾಭಿವೃದ್ಧಿ ಸಂಘದ ಅಧ್ಯಕ್ಷ ದೊಡ್ಡೇಗೌಡ, ಹಿರಿಯ ವಾರ್ತಾಧಿಕಾರಿ ವಿನೋದ್ ಚಂದ್ರ, ನ್ಯಾ.ಮೂ.ಪ್ರತಿಭಾ, ಜಯಪ್ರಕಾಶ್, ಹೊಸೂರು ಗ್ರಾಪಂ ಅಧ್ಯಕ್ಷೆ ಪೂರ್ಣಿಮಾ ಮಂಜುನಾಥ್, ನಿವೃತ್ತ ಪ್ರಧ್ಯಾಪಕ ಪುಟ್ಟೇಗೌಡ, ಜಿಪಂ ಮಾಜಿ ಸದಸ್ಯೆ ಉಜ್ಮಾರಿಜ್ವಿ ಸುದರ್ಶನ್, ಬೆಳ್ಳಿಗೌಡ, ಮಧುಸೂಧನ್ ಚಿನ್ನಹಳ್ಳಿ ಇತರರಿದ್ದರು. ಸನ್ನಿಧಿ, ದವಳಾ, ಗಾನಶ್ರೀ ತಂಡದಿoದ ಪ್ರಾರ್ಥಿಸಿದರು. ನಾಡಗೀತೆ ಕುಮಾರ್ ಕಟ್ಟೆಬೆಳಗುಲಿ ತಂಡದವರು ನಾಡಗೀತೆ ಹಾಡಿದರು. ಕರ್ನಾಟಕ ಜಾನಪದ ಪರಿಷತ್ಯ ತಾಲೂಕು ಅಧ್ಯಕ್ಷ ಆನಚಿದ್ ಸ್ವಾಗತಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!