((follow up))ಇಂದು ರಾಜ್ಯದಲ್ಲಿ ಮೊದಲ ಪ್ಲಾಸ್ಮಾ ತೆರಪಿ: ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್

0
65

ಬೆಂಗಳೂರು: ಕೊರೋನಾ ಸೋಂಕಿತರಿಗೆ ರಾಜ್ಯದಲ್ಲಿ ಮೊದಲ ಪ್ಲಾಸ್ಮಾ ತೆರಪಿ ಚಿಕಿತ್ಸೆ ನೀಡಲಾಗುತ್ತಿದ್ದು, ದಾನಿಯೂ ಒಪ್ಪಿಗೆ ನೀಡಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು.
ಇತ್ತೀಚೆಗಷ್ಟೆ ರಾಜ್ಯದಲ್ಲಿ ಪ್ಲಾಸ್ಮಾ ತೆರಪಿ ನಡೆಸಲು ಡಿಸಿಜಿಐ ಅನುಮತಿ ನೀಡಿದ್ದು, ಇಂದು ಬಿ.ಎಂ.ಸಿ.ಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.
ಈ ಕುರಿತು ಕೇಂದ್ರ ಆರೋಗ್ಯ ಇಲಾಖೆಯ ಜೊತೆ ಚರ್ಚಿಸಿದ ಸಚಿವರು, ಕರ್ನಾಟಕದಲ್ಲಿ ಕೊರೋನಾ ವಿರುದ್ಧ ಹೋರಾಟಕ್ಕೆ ಉತ್ತಮ ಕ್ರಮಗಳು ಕೈಗೊಂಡಿದ್ದು, ಇದೇ ರೀತಿಯಾಗಿ ಬೇರೆ ರಾಜ್ಯಗಳೊಂದಿಗೂ ಹಂಚಿಕೊಳ್ಳಿ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here