ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಿ ಹೈಕಮಾಂಡ್ ಆದೇಶ ಹೊರಡಿಸಿದೆ .
ಇತ್ತ ಯತ್ನಾಳ್ ಉಚ್ಛಾಟನೆ ಬೆನ್ನಲ್ಲೇ ವಿಜಯಪುರದಲ್ಲಿ ಬೆಂಬಲಿಗರ ರಾಜೀನಾಮೆ ಪರ್ವ ಆರಂಭವಾಗಿದೆ. ವಿಜಯಪುರ ಬಿಜೆಪಿ ನಗರ ಒಬಿಸಿ ಮೋರ್ಚಾ ಸ್ಥಾನಕ್ಕೆ ಭೀಮು ಮಾಶ್ಯಾಳ ರಾಜೀನಾಮೆ ನೀಡಿದ್ದಾರೆ.
ಬಿಜೆಪಿ ನಗರ ಮಂಡಳ ಅಧ್ಯಕ್ಷರಾದ ಹೂಗಾರ್ ಸಹ ವಾಟ್ಸಪ್ ಮೂಲಕ ರಾಜೀನಾಮೆ ರವಾನಿಸಿದ್ದಾರೆ. ಯತ್ನಾಳ್ ಅವರ ಉಚ್ಛಾಟನೆಗೆ ವಿಜಯಪುರ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ ಪಕ್ಷವನ್ನೇ ತೊರೆಯುವ ನಿರ್ಧಾರ ಮಾಡಿದ್ದಾರೆ.
ಈಗಾಗಲೇ ಬಿಜೆಪಿ ಪಕ್ಷದ ಈ ನಿರ್ಧಾರದ ವಿರುದ್ಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು, ಯತ್ನಾಳ್ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.