ಮೋದಿ ಸಮಾವೇಶಕ್ಕೆ ಭೂರಿ ಭೋಜನದ ವ್ಯವಸ್ಥೆ: ಹೆಚ್ಚುವರಿ ಪೊಲೀಸ್‌ ಭದ್ರತೆ

ಹೊಸದಿಗಂತ ವರದಿ ಮಂಡ್ಯ:

8,480 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ 117 ಕಿ.ಮೀ ಉದ್ದದ ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ ವೇ ಉದ್ಘಾಟನೆಗೆ ಇಂದು ಮೋದಿ ರಾಜ್ಯಕ್ಕೆ ಬರಲಿದ್ದಾರೆ.

ವಿಶಾಲವಾದ ಜಾಗದಲ್ಲಿ ಸಮಾರಂಭ

120 ಎಕರೆ ವಿಶಾಲವಾದ ಜಾಗದಲ್ಲಿ ವೇದಿಕೆ ಮತ್ತು ಸಭಿಕರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ವೇದಿಕೆ ಮೇಲೆ ಗಣ್ಯರಿಗಷ್ಟೆ ಅವಕಾಶ ನೀಡಲಾಗಿದ್ದು, ಸುಮಾರು ಒಂದೂವರೆ ಲಕ್ಷಕ್ಕೂ ಅಧಿಕ ಕುರ್ಚಿಗಳ ಹಾಕಲಾಗಿದೆ.

ಎರಡೂವರೆ ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡಿದ್ದು, ಇದಕ್ಕಾಗಿ ವೇದಿಕೆ ಸ್ಥಳದಿಂದ ಅನತಿ ದೂರದಲ್ಲಿಯೇ ಪ್ರತ್ಯೇಕವಾಗಿ ಕೌಂಟರ್ ಗಳನ್ನು ತೆರೆಯಲಾಗಿದೆ. ಕಾರ್ಯಕ್ರಮಕ್ಕೆ ಬರುವ ಎರಡೂವರೆ ಲಕ್ಷ ಜನರಿಗೆ ಪಲಾವ್, ಮೊಸರನ್ನ, ಗೋಧಿ ಪಾಯಸ, ಉಪ್ಪಿಟ್ಟು, ಕೇಸರಿ ಬಾತ್ ಬಡಿಸಲಿದ್ದಾರೆ.

ಪಾರ್ಕಿಂಗ್‌ ವ್ಯವಸ್ಥೆ

ಸಮಾರಂಭಕ್ಕೆ ಜನರು ಹಾಗೂ ಫಲಾನುಭವಿಗಳನ್ನು ಕರೆತರಲು ಸಾವಿರಾರು ವಾಹನಗಳ ವ್ಯವಸ್ಥೆ ಮಾಡಿದ್ದು, ಬಿಜೆಪಿ ಪಕ್ಷದಿಂದ
2,900 ಕೆಎಸ್ ಆರ್ ಟಿಸಿ ಬಸ್ ಹಾಗೂ ಖಾಸಗಿ ವಾಹನಗಳಲ್ಲಿ ಜನರು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಕರೆತರಲಾಗುತ್ತದೆ. ವೇದಿಕೆ ಹಿಂಭಾಗ ಒಂದು ಕಿ.ಮೀ ದೂರದಲ್ಲಿ ವಾಹನಗಳ ನಿಲುಗಡೆಗಾಗಿ ವ್ಯವಸ್ಥೆ ಮಾಡಲಾಗಿದೆ.

ಬಿಗಿ ಭದ್ರತೆ
ಪ್ರಧಾನಿ ಮೋದಿರವರ ರೋಡ್ ಶೋ ಹಾಗೂ ವೇದಿಕೆ ಸಮಾರಂಭದ ಸ್ಥಳದಲ್ಲಿ ಹೆಜ್ಜೆ ಹೆಜ್ಜೆಗೂ ಪೊಲೀಸರನ್ನು ನಿಯೋಜಿಸಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ರಾಮನಗರ, ಮೈಸೂರು, ಚಾಮರಾಜನಗರ, ಹಾಸನ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಪೊಲೀಸರನ್ನು ಬಂದೋಬಸ್ತ್ ಗಾಗಿ ನಿಯೋಜಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!