ಸಾಕು ನಾಯಿಯಿಂದ ಪ್ರಾಣಕ್ಕೆ ಕುತ್ತು: ಕಟ್ಟಡದಿಂದ ಜಿಗಿದ ಡೆಲಿವರಿ ಬಾಯ್‌ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಫುಡ್ ಡೆಲಿವರಿ ಪ್ಲಾಟ್‌ಫಾರ್ಮ್ ಸ್ವಿಗ್ಗಿಯ ಡೆಲಿವರಿ ಏಜೆಂಟ್ ರಿಜ್ವಾನ್ ಅವರು ಬಂಜಾರಾ ಹಿಲ್ಸ್ ಪಿಎಸ್ ಮಿತಿಯಲ್ಲಿರುವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಅವರು ಪುಡ್‌ ಡೆಲಿವರಿ ಮಾಡುವ ಸಮಯದಲ್ಲಿ ಸಾಕು ನಾಯಿಯ ದಾಳಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವಾಗ ಕಟ್ಟಡದ ಮೊದಲ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ. ತದನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾಣೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಯಿಯ ಮಾಲೀಕ ಶೋಬನಾ ವಿರುದ್ಧ ಬಂಜಾರ ಹಿಲ್ಸ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!