ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಲವೇ ದಿನಗಳಲ್ಲಿ ಯುಗಾದಿ ಹಬ್ಬ ಬರಲಿದೆ. ಈ ಹಬ್ಬದಂದು ಹೋಳಿಗೆ ಸಾಮಾನ್ಯವಾಗಿ ಜನರು ಇಷ್ಟಪಟ್ಟು ಖರೀದಿ ಮಾಡುತ್ತಾರೆ. ನೀವು ಖರೀದಿ ಮಾಡೋರಿದ್ರೆ ಅದಕ್ಕೂ ಮುಂಚೆ ಈ ಸುದ್ದಿ ಒಮ್ಮೆ ಓದಿ..
ಇತೀಚೆಗೆ ರೆಡಿಮೇಡ್ ಹೋಳಿಗೆ ತಯಾರಿಕೆಯಲ್ಲೂ ಪ್ಲಾಸ್ಟಿಕ್ ಬಳಸ್ತಿದ್ದಾರಂತೆ ಎಂಬ ಆರೋಪ ಕೇಳಿಬಂದಿದೆ. ರಾಜ್ಯಾದ್ಯಂತ ಹೋಳಿಗೆ ಅಂಗಡಿಗಳ ಮೇಲೆ ಆಹಾರ ಇಲಾಖೆ ದಾಳಿ ಮಾಡಿದ್ದು, ಪ್ಲಾಸ್ಟಿಕ್ ಬಳಕೆ ಮಾಡಿರೋ ಅಂಗಡಿಗಳಿಗೆ ನೋಟಿಸ್ ನೀಡಿದ್ದಾರೆ.
ಹೋಳಿಗೆಗೆ ಪ್ಲಾಸ್ಟಿಕ್ ಕವರ್ ಬಳಸಿದ್ರೆ ವಿಷಕಾರಿ ಅಂಶ ಹೋಳಿಗೆ ಸೇರೋ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಈ ಬೆನ್ನಲ್ಲೇ ಹೋಳಿಗೆಯಲ್ಲೂ ಪ್ಲಾಸ್ಟಿಕ್ ಬಳಕೆ ಮಾಡಬಾರದು ಎಂದು ಆರೋಗ್ಯ ಇಲಾಖೆ ನೋಟಿಸ್ ನೀಡಿದೆ.