ಮೆಂತ್ಯೆ ಸೊಪ್ಪಿನ ಕಹಿ ರುಚಿಗೆ ಬಟಾಣಿ ಕಾಳಿನ ಸಿಹಿ ಟಚ್ ಸೇರಿದರೆ ಪಲ್ಯ ಸೂಪರ್ ಆಗಿ ರೆಡಿ ಆಗುತ್ತೆ. ಚಪಾತಿ, ರೊಟ್ಟಿ ಅಥವಾ ಅನ್ನದ ಜೊತೆ ತುಂಬಾ ರುಚಿಯಾಗಿರುತ್ತದೆ.
ಬೇಕಾಗುವ ಪದಾರ್ಥಗಳು
ಮೆಂತ್ಯೆ ಸೊಪ್ಪು – 2 ಕಪ್
ಬಟಾಣಿ ಕಾಳು – 1 ಕಪ್
ಈರುಳ್ಳಿ – 1
ಟೊಮ್ಯಾಟೊ – 1
ಹಸಿಮೆಣಸಿನಕಾಯಿ – 2
ಶುಂಠಿ-ಬೆಳ್ಳುಳ್ಳಿ ಪೇಸ್ಟ್ – 1 ಟೀ ಸ್ಪೂನ್
ಅರಿಶಿನ – ¼ ಟೀ ಸ್ಪೂನ್
ಖಾರ ಪುಡಿ – 1 ಟೀ ಸ್ಪೂನ್
ಧನಿಯಾ ಪುಡಿ – 1 ಟೀ ಸ್ಪೂನ್
ಜೀರಿಗೆ – ½ ಟೀ ಸ್ಪೂನ್
ಸಾಸಿವೆ – ½ ಟೀ ಸ್ಪೂನ್
ಉಪ್ಪು – ರುಚಿಗೆ ತಕ್ಕಷ್ಟು
ಎಣ್ಣೆ – 2 ಟೇಬಲ್ ಸ್ಪೂನ್
ಕೊತ್ತಂಬರಿ ಸೊಪ್ಪು – ಸ್ವಲ್ಪ
ಮಾಡುವ ವಿಧಾನ
ಮೊದಲು ಒಂದು ಬಾಣಲೆಗೆ ಎಣ್ಣೆ ಹಾಕಿ ಬಿಸಿ ಆದ ಬಳಿಕ ಸಾಸಿವೆ, ಜೀರಿಗೆ, ಈರುಳ್ಳಿ ಮತ್ತು ಹಸಿಮೆಣಸಿನಕಾಯಿ ಹಾಕಿ ಬಂಗಾರದ ಬಣ್ಣ ಬರುವವರೆಗೆ ಹುರಿಯಿರಿ.
ಆಮೇಲೆ ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಮತ್ತು ಟೊಮ್ಯಾಟೊ ಹಾಕಿ ಮೃದುವಾಗುವವರೆಗೆ ಬೇಯಿಸಿ. ಈಗ ಬಟಾಣಿ ಕಾಳು ಸೇರಿಸಿ 2–3 ನಿಮಿಷ ಹುರಿಯಿರಿ.
ನಂತರ ಅರಿಶಿನ, ಖಾರ ಪುಡಿ, ಧನಿಯಾ ಪುಡಿ ಮತ್ತು ಉಪ್ಪು ಸೇರಿಸಿ ಚೆನ್ನಾಗಿ ಕಲಸಿ. ಈಗ ಕತ್ತರಿಸಿದ ಮೆಂತ್ಯೆ ಸೊಪ್ಪು ಹಾಕಿ ಮುಚ್ಚಿ 5–7 ನಿಮಿಷ ಮಂದ ಉರಿಯಲ್ಲಿ ಬೇಯಿಸಿ.
ಸೊಪ್ಪು ಚೆನ್ನಾಗಿ ಮೃದುವಾಗಿ, ಬಟಾಣಿ ಬೆಂದ ನಂತರ ಕೊತ್ತಂಬರಿ ಸೊಪ್ಪು ಹಾಕಿ ಇಳಿಸಿ.



