ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿಯಲ್ಲಿ ದೆಹಲಿ ಚಲೋ ಅನ್ನದಾತರ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ದೆಹಲಿಯ ಗಡಿಯಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ನಿಯೋಜಿಸಲಾಗಿದೆ.
ಭದ್ರತಾ ಪಡೆಗಳು ಬ್ಯಾರಿಕೇಡ್ ಹಾಕಿ ರೈತರನ್ನು ತಡೆಯಲು ಹರಸಾಹಸ ಪಡುತ್ತಿದ್ದಾರೆ. ರೈತರು ದೆಹಲಿ ಪ್ರವೇಶಿಸುವುದನ್ನು ತಡೆಯಲು ಉಕ್ಕಿನ ಕೋಟೆಯನ್ನು ನಿರ್ಮಿಸಲಾಗಿದೆ. ಕೇಂದ್ರ ಸರ್ಕಾರ ಹಾಗೂ ರೈತ ಮುಖಂಡರ ನಡುವಿನ ಮಾತುಕತೆ ವಿಫಲವಾಗಿದ್ದು, ಇಂದು ಮತ್ತೆ ಮಾತುಕತೆ ನಡೆಯಲಿದೆ ಎನ್ನಲಾಗಿದೆ.
ರೈತರು ತಮ್ಮ ವಿವಿಧ ಅಗತ್ಯಗಳನ್ನು ಪೂರೈಸಲು ನಡೆಸುತ್ತಿರುವ ‘ದೆಹಲಿ ಚಲೋ’ ಬಿಸಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ದೇಶಾದ್ಯಂತ ರೈತರು ದೆಹಲಿಗೆ ಬರುವುದನ್ನು ತಡೆಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ಸಿಂಘು, ಟಿಕ್ರಿ ಹಾಗೂ ಘಾಜಿಪುರದ ಗಡಿಗಳಲ್ಲಿ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.