Wednesday, August 10, 2022

Latest Posts

ಸೋಮವಾರಪೇಟೆ| ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಸೋಮವಾರಪೇಟೆ:

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಜಿಲ್ಲಾಡಳಿತ, ಜಿ.ಪಂ. ಮತ್ತು ಕಾರ್ಮಿಕರ ಇಲಾಖೆಯ ಆಶ್ರಯದಲ್ಲಿ ಇಲ್ಲಿನ ಪ.ಪಂ. ಸಭಾಂಗಣದಲ್ಲಿ ತಾಲೂಕಿನ ನೋಂದಾಯಿತ ಕಾರ್ಮಿಕರಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಲಾಯಿತು.
ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರು ಕಾರ್ಮಿಕರಿಗೆ ಕಿಟ್ ವಿತರಿಸಿ, ಕಾರ್ಮಿಕರು ಕೆಲಸದ ಸಂದರ್ಭ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇದರೊಂದಿಗೆ ತಲೆಗೆ ಹೆಲ್ಮೆಟ್ ಹಾಕಿಕೊಳ್ಳಬೇಕು. ಕೊರೋನಾ ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ ಕಾರ್ಮಿಕರಿಗೆ ನೆರವು ಒದಗಿಸುವ ದೃಷ್ಟಿಯಿಂದ ಸರ್ಕಾರದ ವತಿಯಿಂದ ಕಿಟ್‌ಗಳನ್ನು ವಿತರಿಸಲಾಗುತ್ತಿದೆ ಎಂದರು.
ಕಾರ್ಮಿಕರು ಸರ್ಕಾರದ ವಿವಿಧ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಕಾರ್ಮಿಕ ಇಲಾಖೆಯ ಕಾರ್ಯಕ್ರಮಗಳ ಬಗ್ಗೆ ಆಗಾಗ್ಗೆ ಮಾಹಿತಿ ಪಡೆದುಕೊಳ್ಳಬೇಕು. ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಪ.ಪಂ. ಪ್ರಭಾರ ಅಧ್ಯಕ್ಷ ಸಂಜೀವ, ಸದಸ್ಯರಾದ ಶೀಲಾ ಡಿಸೋಜ, ಜೀವನ್, ಮಹೇಶ್, ಶರತ್, ಸೋಮೇಶ್, ತಾ.ಪಂ. ಮಾಜೀ ಉಪಾಧ್ಯಕ್ಷ ಅಭಿಮನ್ಯುಕುಮಾರ್, ಜಿಲ್ಲಾ ಕಾರ್ಮಿಕಾಧಿಕಾರಿ ಅನಿಲ್, ವೀರಾಜಪೇಟೆ ತಾಲೂಕು ಅಧಿಕಾರಿ ಜಯಣ್ಣ ಅವರುಗಳು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss