ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

13 ಬಡ ಕೂಲಿಕಾರ್ಮಿಕ ಕುಟುಂಬಗಳಿಗೆ ಆಹಾರ ಪದಾರ್ಥಗಳ ಕಿಟ್‍ ವಿತರಣೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………………….

ಹೊಸ ದಿಗಂತ ವರದಿ, ಚಿಕ್ಕಮಗಳೂರು:

ಕೋವಿಡ್ ಸೋಂಕು ದೃಢಪಟ್ಟು ಹೋಂ ಐಸೋಲೇಷನ್‍ನಲ್ಲಿ ಸಂಕಷ್ಟ ಎದುರಿಸುತ್ತಿದ್ದ ಆವೃತಿಯ ಹೋಬಳಿಯ ಹಾರ್ಜಿಹಳ್ಳಿಯ ಸುಮಾರು 13 ಬಡ ಕೂಲಿಕಾರ್ಮಿಕ ಕುಟುಂಬಗಳಿಗೆ ಬ್ರಾಹ್ಮಣ ಮಹಾಸಭಾ ವತಿಯಿಂದ ಶನಿವಾರ ಉಚಿತವಾಗಿ ಆಹಾರ ಪದಾರ್ಥಗಳ ಕಿಟ್‍ಗಳನ್ನು ವಿತರಿಸಲಾಯಿತು.
ಕೋವಿಡ್ 2ನೇ ಅಲೆಯಲ್ಲಿ ಸರ್ಕಾರ ಘೋಷಿಸಿರುವ ಜನತಾ ಕಫ್ರ್ಯೂನಿಂದಾಗಿ ಸಾಮಾನ್ಯ ಕಡು ಬಡವರ ಜೀವನ ನಿರ್ವಹಣೆ ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಬ್ರಾಹ್ಮಣ ಮಹಾಸಭಾದ ಕಾರ್ಯಕಾರಿ ಮಂಡಳಿ ಸದಸ್ಯರ ತಂಡ ಮಾನವೀಯತೆ ದೃಷ್ಟಿಯಿಂದ 13 ಬಡ ಕೂಲಿಕಾರ್ಮಿಕರಿಗೆ ಆಹಾರದ ಕಿಟ್‍ಗಳನ್ನು ನೀಡಿದೆ.
ಈ ವೇಳೆ ಚಿಕ್ಕಮಗಳೂರು ತಹಸೀಲ್ದಾರ್ ಡಾ. ಕಾಂತರಾಜ್ ಮಾತನಾಡಿ ಕೋವಿಡ್ 2ನೇ ಅಲೆಯಲ್ಲಿ ಜಿಲ್ಲೆಯಲ್ಲಿ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದು ತಾಲ್ಲೂಕಿನ ಆವತಿ ಹೋಬಳಿಯ ಬುಡಕಟ್ಟು ಸಮುದಾಯವೊಂದರಲ್ಲಿ ನೆಲೆಸಿರುವ 13 ಕುಟುಂಬಗಳಲ್ಲಿ 19 ಜನರಿಗೆ ಕೋವಿಡ್ ಪಾಸಿಟಿವ್ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆ ಆರೋಗ್ಯ ಇಲಾಖೆ, ಸ್ಥಳೀಯ ಪಂಚಾಯಿತಿ ಆರೋಗ್ಯ ಅಧಿಕಾರಿಗಳ ತಂಡ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸಿ 14 ದಿನ ಹೋಂ ಐಸೋಲೇಷನ್‍ನಲ್ಲಿರಲು ಸೂಚಿಸಲಾಗಿತ್ತು. ಅವರೆಲ್ಲರೂ ಕೂಲಿಕಾರ್ಮಿಕರಾಗಿರುವ ಕಾರಣ ಆಹಾರದ ಸಮಸ್ಯೆಯ ಬಗ್ಗೆ ಅಳಲು ತೋಡಿಕೊಂಡಿದ್ದರು, ಈ ವಿಚಾರವನ್ನು ಬ್ರಾಹ್ಮಣ ಮಹಾಸಭಾದವರ ಮುಂದಿಡಲಾಗಿತ್ತು ಇದೀಗ ಅವರು ಸ್ಪಂದಿಸಿ ಉಚಿತವಾಗಿ ಕಿಟ್‍ಗಳನ್ನು ವಿತರಿಸಿದ್ದಾರೆ ಎಂದರು.
ಆಹಾರದÀ ಕಿಟ್‍ನಲ್ಲಿ ತಲಾ 5 ಕೆ.ಜಿ. ಅಕ್ಕಿ, ಅರ್ಧ ಕೆಜಿ ಬೇಳೆ, ಕಾಫಿಪುಡಿ, ರವೆ, ಉಪ್ಪು, ಸೋಪು, ಸಕ್ಕರೆ, ಅಡುಗೆ ಎಣ್ಣೆ ಸೇರಿದಂತೆ ದಿನನಿತ್ಯದ ಅಗತ್ಯ ವಸ್ತುಗಳನ್ನು ನೀಡಲಾಗಿದೆ. ಕೋವಿಡ್ ಬಗ್ಗೆ ಹೆಚ್ಚು ಜಾಗರೂಕವಾಗಿರುವಂತೆ ತಿಳಿಸಲಾಗಿದೆ ಎಂದರು.
ಬ್ರಾಹ್ಮಣ ಸಭಾದ ಅಧ್ಯಕ್ಷ ಮಂಜುನಾಥ್ ಜೋಷಿ ಮಾತನಾಡಿ ದೇಶದಲ್ಲಿ ಕೋರೋನಾ ಆವರಿಸಿರುವುದು ಒಂದು ಕೆಟ್ಟ ಘಳಿಗೆ. ಈ ಸಂದರ್ಭದಲ್ಲಿ ಜನತೆ ಸಾಕಷ್ಟು ನೋವು ಅನುಭವಿಸುತ್ತಿದ್ದಾರೆ. ಜನರ ಸಂಕಷ್ಟಗಳಿಗೆ ಮಾನವೀಯತೆಯಿಂದ ನೆರವಾಗುವ ನಿಟ್ಟಿನಲ್ಲಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ಸುಮಾರು 13 ಕುಟುಂಬಗಳಿಗೆ 25 ಆಹಾರದ ಕಿಟ್‍ಗಳನ್ನು ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ಬಡವರ ಕಷ್ಟಗಳಿಗೆ ಸಮಾಜ ಶ್ರಮಿಸಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಭಾದ ನಿರ್ದೇಶಕ ನಾಗೇಂದ್ರ ಸೇರಿದಂತೆ ಮತ್ತಿತರರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss