ಚಹಾದೊಂದಿಗೆ ಬಿಸಿಬಿಸಿಯಾಗಿ ತಿನ್ನಲು ಏನಾದರೂ ಸಿಕ್ಕರೆ ಅದರಲ್ಲಿ ಸಿಗುವ ಮಜಾನೇ ಬೇರೆ. ಕೇವಲ 10 ನಿಮಿಷದಲ್ಲಿ ತಯಾರಿಸಬಹುದಾದ ಪನೀರ್ ಪಕೋಡ ರೆಸಿಪಿ ಹೇಗೆ ಮಾಡುವುದು ಎಂಬುದನ್ನು ನೋಡೋಣ.
ಬೇಕಾಗುವ ಸಾಮಗ್ರಿಗಳು:
ಪನೀರ್ ಕ್ಯೂಬ್ಸ್ – 500 ಗ್ರಾಂ
ಕಡ್ಲೆ ಹಿಟ್ಟು – 1 ಕಪ್
ಅಚ್ಚಖಾರದ ಪುಡಿ – 1 ಚಮಚ
ಅರಶಿಣ – 1 ಚಮಚ
ಉಪ್ಪು – ರುಚಿಗೆ ತಕ್ಕಷ್ಟು
ಜೀರಿಗೆ ಪುಡಿ – ಅರ್ಧ ಚಮಚ
ಅಡುಗೆ ಸೋಡಾ – 1 ಚಮಚ
ಎಣ್ಣೆ – ಅಗತ್ಯಕ್ಕೆ ತಕ್ಕಷ್ಟು
ಚಾಟ್ ಮಸಾಲ – ಸ್ವಲ್ಪ
ಮಾಡುವ ವಿಧಾನ:
ಮೊದಲಿಗೆ ಒಂದು ಪಾತ್ರೆಯಲ್ಲಿ ಕಡ್ಲೆಹಿಟ್ಟನ್ನು ಹಾಕಿಕೊಂಡು ಅದಕ್ಕೆ ನೀರು, ಅಚ್ಚಖಾರದ ಪುಡಿ, ಜೀರಿಗೆ ಪುಡಿ, ಉಪ್ಪು, ಅರಶಿಣ ಮತ್ತು ಸೋಡಾ ಹಾಕಿಕೊಂಡು ಚನ್ನಾಗಿ ಮಿಕ್ಸ್ ಮಾಡಿ ಇದಕ್ಕೆ ಪನೀರ್ ಕ್ಯೂಬ್ಸ್ ಅನ್ನು ಚನ್ನಾಗಿ ಅದ್ದಿ ಮಿಶ್ರಣದೊಂದಿಗೆ ಪನೀರ್ ಚನ್ನಾಗಿ ಹೊಂದಿಕೊಳ್ಳುವಂತೆ ಕೋಟಿಂಗ್ ಮಾಡಿ.
ಬಳಿಕ ಒಂದು ಬಾಣಾಲೆಯಲ್ಲಿ ಸ್ವಲ್ಪ ಎಣ್ಣೆ ಬಿಸಿಗಿಟ್ಟು, ಕಾದ ಬಳಿಕ ಅದಕ್ಕೆ ಈ ಪನೀರ್ ಕ್ಯೂಬ್ಸ್ ಅನ್ನು ಹಾಕಿ ಚನ್ನಾಗಿ ಫ್ರೈ ಮಾಡಿಕೊಳ್ಳಿ. ನಂತರ ಅದನ್ನು ಎಣ್ಣೆಯಿಂದ ತೆಗೆದು ಅದರ ಮೇಲೆ ಸ್ವಲ್ಪ ಚಾಟ್ ಮಸಾಲ ಪುಡಿಯನ್ನು ಉದುರಿಸಿದರೆ ಬಿಸಿಬಿಸಿ ಪನೀರ್ ಪಕೋಡ ತಿನ್ನಲು ರೆಡಿ.