ಬೇಕಾಗುವ ಸಾಮಗ್ರಿಗಳು
ಮೊಟ್ಟೆ: 4 ರಿಂದ 5
ಈರುಳ್ಳಿ: 2
ಟೊಮೆಟೊ: 2
ಶುಂಠಿ-ಬೆಳ್ಳುಳ್ಳಿ ಪೇಸ್ಟ್: 1 ಚಮಚ
ಮಸಾಲೆ ಪುಡಿಗಳು: ಅಚ್ಚ ಖಾರದ ಪುಡಿ, ಅರಿಶಿನ, ಧನಿಯಾ ಪುಡಿ, ಗರಂ ಮಸಾಲಾ
ಹಸಿಮೆಣಸಿನಕಾಯಿ: 2
ಕರಿಬೇವು ಮತ್ತು ಕೊತ್ತಂಬರಿ ಸೊಪ್ಪು: ಸ್ವಲ್ಪ
ಉಪ್ಪು ಮತ್ತು ಎಣ್ಣೆ: ರುಚಿಗೆ ತಕ್ಕಷ್ಟು
ತಯಾರಿಸುವ ವಿಧಾನ
ಮೊದಲು ಒಂದು ಪಾತ್ರೆಯಲ್ಲಿ ಮೊಟ್ಟೆಗಳನ್ನು ಒಡೆದು ಹಾಕಿಕೊಳ್ಳಿ. ಅದಕ್ಕೆ ಸ್ವಲ್ಪ ಉಪ್ಪು ಮತ್ತು ಕಾಳುಮೆಣಸಿನ ಪುಡಿ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ . ಈಗ ಒಂದು ಸ್ಟೀಲ್ ಬಾಕ್ಸ್ ಅಥವಾ ತಟ್ಟೆಗೆ ಎಣ್ಣೆ ಸವರಿ, ಈ ಮೊಟ್ಟೆ ಮಿಶ್ರಣವನ್ನು ಸುರಿಯಿರಿ. ಇದನ್ನು ಇಡ್ಲಿ ಪಾತ್ರೆಯಲ್ಲಿ ಸುಮಾರು 10-12 ನಿಮಿಷಗಳ ಕಾಲ ಹಬೆಯಲ್ಲಿ ಬೇಯಿಸಿ. ಬೆಂದ ನಂತರ ಇದನ್ನು ಸಣ್ಣ ಸಣ್ಣ ಚೌಕಾಕಾರದ ತುಂಡುಗಳಾಗಿ ಕತ್ತರಿಸಿ.
ಒಂದು ಬಾಣಲೆಯಲ್ಲಿ ಎಣ್ಣೆ ಕಾಯಿಸಿ, ಅದಕ್ಕೆ ಸಾಸಿವೆ, ಕರಿಬೇವು ಮತ್ತು ಹಸಿಮೆಣಸಿನಕಾಯಿ ಹಾಕಿ. ನಂತರ ಹೆಚ್ಚಿದ ಈರುಳ್ಳಿ ಸೇರಿಸಿ ಹೊಂಬಣ್ಣ ಬರುವವರೆಗೆ ಹುರಿಯಿರಿ. ಇದಕ್ಕೆ ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಸೇರಿಸಿ ಹಸಿ ವಾಸನೆ ಹೋಗುವವರೆಗೆ ಕೈಯಾಡಿಸಿ.
ಈಗ ಟೊಮೆಟೊ ಸೇರಿಸಿ ಮೆತ್ತಗಾಗುವವರೆಗೆ ಬೇಯಿಸಿ. ನಂತರ ಅರಿಶಿನ, ಖಾರದ ಪುಡಿ, ಧನಿಯಾ ಪುಡಿ ಮತ್ತು ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಎಣ್ಣೆ ಬಿಡುವವರೆಗೆ ಫ್ರೈ ಮಾಡಿ. ಸಿದ್ಧಪಡಿಸಿದ ಮಸಾಲೆಗೆ ಕತ್ತರಿಸಿಟ್ಟ ಮೊಟ್ಟೆಯ ತುಂಡುಗಳನ್ನು ಸೇರಿಸಿ. ಮಸಾಲೆ ಎಲ್ಲಾ ತುಂಡುಗಳಿಗೆ ಸರಿಯಾಗಿ ತಗುಲುವಂತೆ ಹಗುರವಾಗಿ ಮಿಕ್ಸ್ ಮಾಡಿ. ಕೊನೆಯಲ್ಲಿ ಸ್ವಲ್ಪ ಗರಂ ಮಸಾಲಾ ಮತ್ತು ಕೊತ್ತಂಬರಿ ಸೊಪ್ಪು ಉದುರಿಸಿದರೆ ಬಿಸಿ ಬಿಸಿ ಎಗ್ ಚಂಕ್ಸ್ ಸಿದ್ಧ!

