ದಕ್ಷಿಣ ಭಾರತದ ಸಾಂಪ್ರದಾಯಿಕ ಆಹಾರಗಳಲ್ಲಿ ತಂಬುಳಿ ಒಂದು ವಿಶೇಷ ಸ್ಥಾನ ಹೊಂದಿದೆ. ವಿಶೇಷವಾಗಿ ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡಲು ತಂಬುಳಿ ತುಂಬಾ ಉಪಯುಕ್ತ. ತಿಮರೆ ಅಥವಾ ಒಂದೆಲಗ ಎಂದು ಕರೆಯಲ್ಪಡುವ ಈ ಸೊಪ್ಪು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಹೇಳಲಾಗುತ್ತದೆ. ಇದು ಮೆದುಳಿನ ಶಕ್ತಿ ಹೆಚ್ಚಿಸಲು, ಜೀರ್ಣಕ್ರಿಯೆ ಸುಧಾರಿಸಲು ಮತ್ತು ದೇಹಕ್ಕೆ ತಂಪು ನೀಡಲು ಸಹಕಾರಿ. ಇಂತಹ ಆರೋಗ್ಯಕರ ಸೊಪ್ಪಿನಿಂದ ಮಾಡಬಹುದಾದ ರುಚಿಯಾದ ಒಂದೆಲಗದ ತಂಬುಳಿ ಮಾಡುವ ವಿಧಾನ ಇಲ್ಲಿದೆ.
ಬೇಕಾಗುವ ಪದಾರ್ಥಗಳು
ಒಂದೆಲಗ ಸೊಪ್ಪು – 1 ಕಪ್
ತೆಂಗಿನ ತುರಿ – ½ ಕಪ್
ಹಸಿಮೆಣಸಿನಕಾಯಿ – 1 ಅಥವಾ 2
ಜೀರಿಗೆ – ½ ಟೀ ಸ್ಪೂನ್
ಮೊಸರು – 1 ಕಪ್
ಉಪ್ಪು – ರುಚಿಗೆ ತಕ್ಕಷ್ಟು
ಒಗ್ಗರಣೆಗೆ:
ಎಣ್ಣೆ – 1 ಟೀ ಸ್ಪೂನ್
ಸಾಸಿವೆ – ½ ಟೀ ಸ್ಪೂನ್
ಒಣಮೆಣಸಿನಕಾಯಿ – 1
ಕರಿಬೇವು – ಸ್ವಲ್ಪ
ಮಾಡುವ ವಿಧಾನ
ಮೊದಲು ಒಂದೆಲಗ ಸೊಪ್ಪನ್ನು ಚೆನ್ನಾಗಿ ತೊಳೆದು ಸ್ವಲ್ಪ ಎಣ್ಣೆಯಲ್ಲಿ ಸ್ವಲ್ಪ ಹೊತ್ತು ಹುರಿದುಕೊಳ್ಳಿ. ನಂತರ ಮಿಕ್ಸಿ ಜಾರಿನಲ್ಲಿ ತೆಂಗಿನ ತುರಿ, ಹಸಿಮೆಣಸಿನಕಾಯಿ, ಜೀರಿಗೆ ಮತ್ತು ಹುರಿದ ಸೊಪ್ಪನ್ನು ಹಾಕಿ ಸ್ವಲ್ಪ ನೀರು ಸೇರಿಸಿ ಮೃದುವಾಗಿ ರುಬ್ಬಿಕೊಳ್ಳಿ.
ಈ ಮಿಶ್ರಣವನ್ನು ಒಂದು ಪಾತ್ರೆಗೆ ಹಾಕಿ ಅದಕ್ಕೆ ಮೊಸರು ಮತ್ತು ಉಪ್ಪು ಸೇರಿಸಿ ಚೆನ್ನಾಗಿ ಕಲಸಿ. ನಂತರ ಒಂದು ಸಣ್ಣ ಪಾತ್ರೆಯಲ್ಲಿ ಎಣ್ಣೆ ಬಿಸಿ ಮಾಡಿ ಸಾಸಿವೆ, ಒಣಮೆಣಸಿನಕಾಯಿ ಮತ್ತು ಕರಿಬೇವು ಹಾಕಿ ಒಗ್ಗರಣೆ ಮಾಡಿ ತಂಬುಳಿಗೆ ಸೇರಿಸಿ.



