ಆಕಸ್ಮಿಕವಾಗಿ ಕಾಲು ಜಾರಿ ಕೆರೆ ಬಿದ್ದು ಸಾವು

ಹೊಸದಿಗಂತ ವರದಿ,ಮುಂಡಗೋಡ: 

ಕೆರೆಯಲ್ಲಿ ಆಕಸ್ಮಿಕ ಕಾಲು ಜಾರಿ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ಚಿಗಳ್ಳಿ ಗ್ರಾಮದಲ್ಲಿ ಶನಿವಾರ ಜರುಗಿದೆ.
ಮೈಲಾರಪ್ಪ ಸುರೇಶ ಕುಂಬಾರ(45) ನೀರಿನಲ್ಲಿ ಮುಳುಗಿರುವ ವ್ಯಕ್ತಿಯಾಗಿದ್ದಾನೆ. ಗಿರಿಮಲ್ಲೇಶ್ವರ ಮಠದ ಎದುರಿನ ಕೆರೆಯಲ್ಲಿ ಈ ದುರ್ಘಟನೆ ನಡೆದಿದೆ. ನೀರಿಗೆ ಇಳಿದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ, ಮೃತದೇಹದ ಹುಡುಕಾಟ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!