September 27, 2026
Sunday, September 27, 2026
spot_img

ಫುಟ್​ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ ಹೊಸ ಇತಿಹಾಸ, ಇಡೀ ಮ್ಯಾಚ್‌ ಸಂಪೂರ್ಣ ʼಮೆಸ್ಸಿಮಯʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಫುಟ್‌ಬಾಲ್‌ ಲೋಕದ ಮಾಂತ್ರಿಕ ಲಿಯೋನೆಲ್‌ ಮೆಸ್ಸಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

2026ರ ಫಿಫಾ ವಿಶ್ವಕಪ್‌ನ ಗ್ರೂಪ್ ‘ಜೆ’ ನ ಆರಂಭಿಕ ಪಂದ್ಯದಲ್ಲಿ ಆಲ್ಜೀರಿಯಾ ವಿರುದ್ಧ ಭರ್ಜರಿ ಹ್ಯಾಟ್ರಿಕ್ ಗೋಲು ಸಿಡಿಸುವ ಮೂಲಕ ಮೆಸ್ಸಿ, ಜರ್ಮನಿಯ ದಿಗ್ಗಜ ಮಿರೋಸ್ಲಾವ್ ಕ್ಲೋಸ್ ಅವರ ಹೆಸರಲ್ಲಿದ್ದ ಅತಿ ಹೆಚ್ಚು ವಿಶ್ವಕಪ್ ಗೋಲುಗಳ ಸಾರ್ವಕಾಲಿಕ ದಾಖಲೆಯನ್ನು ಸರಿಗಟ್ಟಿದ್ದಾರೆ.

ಜರ್ಮನಿ ಪರ 24 ವಿಶ್ವಕಪ್ ಪಂದ್ಯಗಳನ್ನಾಡಿರುವ ಮಿರೋಸ್ಲಾವ್ ಕ್ಲೋಸ್ 16 ಗೋಲುಗಳನ್ನು ಬಾರಿಸಿ ಫಿಫಾ ವಿಶ್ವಕಪ್​ ಇತಿಹಾಸದಲ್ಲೇ ಅತ್ಯಧಿಕ ಗೋಲು ದಾಖಲಿಸಿದ ವಿಶ್ವ ದಾಖಲೆ ನಿರ್ಮಿಸಿದ್ದರು. ಮೆಸ್ಸಿ ಈ ದಾಖಲೆಯನ್ನು ಮುರಿದಿದ್ದಾರೆ. ಮೆಸ್ಸಿ ಭರ್ಜರಿ ಪ್ರದರ್ಶನದಿಂದಾಗಿ ಹಾಲಿ ಚಾಂಪಿಯನ್‌ ಅರ್ಜೆಂಟೀನಾ ಅಲ್ಜೀರಿಯಾ ವಿರುದ್ಧ 3-0 ಗೋಲುಗಳ ಶುಭ ಆರಂಭ ಮಾಡಿದೆ. ಅಮೆರಿಕದ ಕನ್ಸಾಸ್‌ ಸಿಟಿಯಲ್ಲಿ ನಡೆದ ಈ ಪಂದ್ಯ ಸಂಪೂರ್ಣ ಮೆಸ್ಸಿಮಯವಾಗಿತ್ತು. ಈ ಪಂದ್ಯದಲ್ಲಿ ಮೆಸ್ಸಿ ಕಣಕ್ಕಿಳಿಯುವ ಮೂಲಕ ಆರು ವಿಭಿನ್ನ ವಿಶ್ವಕಪ್ ಟೂರ್ನಿಗಳಲ್ಲಿ (2006, 2010, 2014, 2018, 2022, 2026) ಅರ್ಜೆಂಟೀನಾ ತಂಡವನ್ನು ಪ್ರತಿನಿಧಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Must Read