Wednesday, August 17, 2022

Latest Posts

ಇಂಗ್ಲೆಂಡ್ ವಿರುದ್ಧದ ಭರ್ಜರಿ ಗೆಲುವಿಗೆ ಪ್ರಧಾನಿ ಮೋದಿಯಿಂದ ಅಭಿನಂದನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ಆನ್ ಲೈನ್ ಡೆಸ್ಕ್

ಭಾರತ ಮತ್ತು ಇಂಗ್ಲೆಂಡ್ ನಡುವೆ ಓವಲ್ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ 157 ರನ್‌ಗಳ ಭರ್ಜರಿ ಗೆಲುವನ್ನು ದಾಖಲಿಸಿ 50 ವರ್ಷಗಳ ನಂತರ ಓವಲ್ ಕ್ರೀಡಾಂಗಣದಲ್ಲಿ ಗೆಲುವು ಸಾಧಿಸಿದ ಇತಿಹಾಸ ನಿರ್ಮಿಸಿದೆ. ಈ ಗೆಲುವಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೂಡ ಟ್ವೀಟ್ ಮಾಡುವ ಮೂಲಕ ಟೀಮ್ ಇಂಡಿಯಾ ವಿಜಯಕ್ಕೆ ಶುಭಾಶಯ ಕೋರಿದ್ದಾರೆ. ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ‘ಕೊರೊನಾ ಲಸಿಕಾ ವಿತರಣೆ ಮತ್ತು ಕ್ರಿಕೆಟ್ ಪಿಚ್ ಎರಡರಲ್ಲೂ ಇದು ಅತ್ಯುತ್ತಮ ದಿನವಾಗಿದ್ದು ಎರಡರಲ್ಲೂ ಭಾರತ ಗೆದ್ದಿದೆ’ ಎಂದು ಬರೆದುಕೊಳ್ಳುವುದರ ಮೂಲಕ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!