ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೃಷಿ- ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ಕೊಡಿಸಲು ಶೋಭಾ ಕರಂದ್ಲಾಜೆಗೆ ಮನವಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………….

ಹೊಸ ದಿಗಂತ ವರದಿ, ಚಿಕ್ಕಮಗಳೂರು:

ಕೋವಿಡ್‍ನಿಂದಾಗಿ ಆರ್ಥಿ ಸಂಕಷ್ಟ ಎದುರಿಸುತ್ತಿರುವ ಜಿಲ್ಲೆಯ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ಕೊಡಿಸಬೇಕು ಎಂದು ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಬಿಜೆಪಿ ಪದಾಧಿಕಾರಿಗಳು ದೆಹಲಿಯಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಶಾಸಕರು, ವಿಧಾನ ಪರಿಷತ್ ಉಪಸಭಾಪತಿ, ಬಿಜೆಪಿ  ಪದಾಧಿಕಾರಿಗಳನ್ನೊಳಗೊಂಡ ನಿಯೋಗ ಮಲೆನಾಡು ಭಾಗದ ಕಾಫಿ, ಅಡಕೆ, ಮೆಣಸು ಹಾಗೂ ಇತರೆ ರೈತರುಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಒತ್ತಾಯಿಸಿದೆ.
ಕಾಫಿ ಬೆಳೆಗೆ ಸಂಬಂಧಿಸಿದಂತೆ ಸರ್ಫೇಸಿ ಕಾಯ್ದೆಯನ್ನು ಹಿಂತೆಗೆದುಕೊಳ್ಳಬೇಕು, ಮಲೆನಾಡಿನ ಮುಖ್ಯ ಬೆಳೆಗಳಾದ ಅಡಿಕೆ, ಮೆಣಸು ಬೆಳೆಗಾರರ ಬೇಡಿಕೆಗಳಿಗೆ ಸ್ಪಂದಿಸಬೇಕು. ಬೇರೆ ದೇಶಗಳ ಮೆಣಸು ಭಾರತದ ಮಾರುಕಟ್ಟೆ ಪ್ರವೇಸಿದಂತೆ ಕ್ರಮಕೈಗೊಳ್ಳಬೇಕು. ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ರೈತರು ಪದೇ ಪದೇ ದಾಖಲೆಗಳನ್ನು ನೀಡುವ ಬದಲಾಗಿ ಸರ್ಕಾರದ ಬಳಿಯಲ್ಲೇ ಇರುವ ದಾಖಲೆಗಳನ್ನು ಪರಿಗಣಿಸಿ ಏಕಗವಾಕ್ಷಿ ಪದ್ದತಿ ತಂದು ನೆರವಾಗುವಂತೆ ವಿನಂತಿಸಿಕೊಳ್ಳಲಾಗಿದೆ.
ಕಂದಾಯ ಭೂಮಿಯನ್ನು ಡೀಮ್ಡ್ ಅರಣ್ಯದಿಂದ ಹೊರಗಿಡಬೇಕು, ಸಂಕಷ್ಟದಲ್ಲಿರುವ ಜಿಲ್ಲೆಯ ರೈತ ವರ್ಗಕ್ಕೆ ಕೇಂದ್ರದ ವಿವಿಧ ಯೋಜನೆಗಳ ಅಡಿಯಲ್ಲಿ ವಿಶೇಷ ಅನುದಾನ ಒದಗಿಸಬೇಕು ಹಾಗೂ ಕೇಂದ್ರದ ತೆಂಗು ಮಂಡಳಿಗೆ ತೆಂಗು ಬೆಳೆಗಾರರನೇ ಅಧ್ಯಕ್ಷರನ್ನಾಗಿ ಮಾಡುವಂತೆ ಮನವಿ ಮಾಡಲಾಗಿದೆ.
ನಿಯೋಗದಲ್ಲಿ ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್. ಸಿಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್, ಕಡೂರು ಶಾಸಕ ಬೆಳ್ಳಿಪ್ರಕಾಶ್, ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮುರುಡಪ್ಪ, ಜಿಲ್ಲಾ ಉಪಾಧ್ಯಕ್ಷ ದೀಪಕ್ ದೊಡ್ಡಯ್ಯ, ಆಲ್ದೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುದರ್ಶನ್, ರೈತ ಮೋರ್ಚಾದ ಅಧ್ಯಕ್ಷ ಕಿಶನ್, ಜಿಲ್ಲಾ ಕಾರ್ಯದರ್ಶಿ ಹೆಡದಾಳ್ ಸಂಪತ್, ರವಿ ಬಸರವಳ್ಳಿ, ಆಲ್ದೂರು ಮಂಡಲ ಅಧ್ಯಕ್ಷ ದಿನೇಶ್ ಮುಗುಳುವಳ್ಳಿ, ಪ್ರದೀಪ್, ಭರತ್, ಪ್ರತಾಪ್, ತುಂಗೇಶ್ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss