ಮದ್ಯ ಪ್ರಿಯರಿಗೆ ಕಹಿ ಸುದ್ದಿ: ಜು. 9ರಿಂದ ಮದ್ಯ ಮಾರಾಟ ಬಂದ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರ ಮದ್ಯ ಪೂರೈಕೆ ವ್ಯವಸ್ಥೆಯಲ್ಲಿನ ಲೋಪಗಳನ್ನು ಸರಿಪಡಿಸದಿದ್ದರೆ ಜು. 9ರಿಂದ ಮದ್ಯ ಮಾರಾಟ ಬಂದ್ ಮಾಡಲಾಗುವುದು ಎಂದು ಮದ್ಯ ಮಾರಾಟಗಾರರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಎಸ್.ಗುರುಸ್ವಾಮಿ ಎಚ್ಚರಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ಯ ಖರೀಸಲು ಬೇಕಾಗಿರುವ ಪ್ರಕ್ರಿಯೆಯಲ್ಲಿ ಹತ್ತಾರು ಗೊಂದಲಗಳಿವೆ. ಹೀಗಾಗಿ ಸಕಾಲದಲ್ಲಿ ಮದ್ಯ ಪೂರೈಕೆಯಾಗುತ್ತಿಲ್ಲ ಇದರಿಂದ ಬಾರ್ ಮಾಲೀಕರು ಸಂಕಷ್ಟ ಅನುಭವಿಸುವಂತಾಗಿದೆ. ಈ ಹಿಂದಿನ ವ್ಯವಸ್ಥೆಯಲ್ಲಿ ಕೆಎಸ್ ಬಿಸಿ ಎಲ್ ಅಕೌಂಟ್ ಗೆ ಹಣ ಜಮೆ ಮಾಡಿದರೆ ಸುಲಭವಾಗಿ ಬೇಕಾದ ಮದ್ಯ ಸಿಗುತ್ತಿತ್ತು. ಆದರೆ ಏಪ್ರಿಲ್ 4ರಿಂದ ಹೊಸ ಪದ್ಧತಿ ಆರಂಭವಾಗಿದ್ದು, ಇದರ ಹಿಂದೆಯೇ ಸಮಸ್ಯೆಗಳು ಪ್ರಾರಂಭವಾಗಿದೆ.
ಈ ನಿಟ್ಟಿನಲ್ಲಿ ಮುಂದಿನ 24 ಗಂಟೆಗಳ ಒಳಗೆ ಮದ್ಯ ಖರೀದಿ ಇಂಡೆಂಟಿಂಗ್ ವ್ಯವಸ್ಥೆ ಸರಿಪಡಿಸಬೇಕು. ಇಲ್ಲವಾದಲ್ಲಿ ಮದ್ಯ ಮಾರಾಟ ನಿಲ್ಲಿಸಿ ಉಗ್ರ ಹೋರಾಟ ಮಾಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!