spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, September 28, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದುಬಾರಿ ಕಾರಿಗೆ ಸುಂಕ ವಿನಾಯಿತಿ ಕೇಳಿದ್ದ ನಟ ಧನುಷ್ ನನ್ನು ತೀವ್ರ ತರಾಟೆ ತೆಗೆದುಕೊಂಡ ಹೈಕೋರ್ಟ್!

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್

ತನ್ನ ದುಬಾರಿ ಕಾರಿನ ಮೇಲಿನ ಆಮದು ಸುಂಕ ವಿನಾಯಿತಿ ಕೇಳಿದ್ದ ರಾಷ್ಟ್ರಪ್ರಶಸ್ತಿ ವಿಜೇತ, ಕಾಲಿವುಡ್ ನಟ ಧನುಷ್ ಅವರನ್ನು ಮದ್ರಾಸ್ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.
2015ರಲ್ಲಿ ಧನುಷ್​ ರೋಲ್ಸ್​ ರಾಯ್ಸ್​ ಕಾರನ್ನು ವಿದೇಶದಿಂದ ಆಮದು ಮಾಡಿಕೊಂಡಿದ್ದರು. ಇದಕ್ಕೆ ಅವರು 60 ಲಕ್ಷ ರೂಪಾಯಿ ಎಂಟ್ರಿ ಟ್ಯಾಕ್ಸ್​ ಪಾವತಿ ಮಾಡಬೇಕಿತ್ತು. ಧನುಷ್ ಅರ್ಧದಷ್ಟು ತೆರಿಗೆ ಪಾವತಿಸಿ ಉಳಿದಿದ್ದಕ್ಕೆ ವಿನಾಯಿತಿ ನೀಡುವಂತೆ ಕೋರಿದ್ದರು. ಈ ಅರ್ಜಿಯನ್ನು ಮದ್ರಾಸ್​ ಹೈಕೋರ್ಟ್​ನ ನ್ಯಾಯಮೂರ್ತಿ ಎಸ್​.ಎಂ. ಸುಬ್ರಮಣಿಯಮ್​ ಅವರು ವಿಚಾರಣೆ ನಡೆಸಿದ್ದಾರೆ. ಅಲ್ಲದೆ, ತೆರಿಗೆ ವಿನಾಯಿತಿ ನೀಡಲು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.
‘ತೆರಿಗೆದಾರರ ಹಣವನ್ನು ಬಳಸಿಕೊಂಡು ನೀವು ರಸ್ತೆಗಳಲ್ಲಿ ಐಷಾರಾಮಿ ಕಾರನ್ನು ಓಡಿಸುತ್ತೀರಿ. ಹಾಲು ಮಾರಾಟಗಾರ ಮತ್ತು ದಿನಗೂಲಿ ಕಾರ್ಮಿಕರು ಕೂಡ ತಾವು ಖರೀದಿಸುವ ಪ್ರತಿ ಲೀಟರ್ ಪೆಟ್ರೋಲ್‌ಗೆ ತೆರಿಗೆ ಪಾವತಿಸುತ್ತಿದ್ದಾರೆ. ಈ ವ್ಯಕ್ತಿಗಳು ತೆರಿಗೆ ವಿನಾಯಿತಿ ಕೋರಿ ಹೈಕೋರ್ಟ್ ಅನ್ನು ಸಂಪರ್ಕಿಸಿಲ್ಲ ಎಂದು ಕೋರ್ಟ್ ಛಿಮಾರಿ ಹಾಕಿದೆ.
ಧನುಷ್​ ಸಲ್ಲಿಕೆ ಮಾಡಿದ ಅರ್ಜಿ ವಿಚಾರಣೆಗೆ 2021 ಆಗಸ್ಟ್ 5 ರಂದು ಬಂದಿದ್ದು, ಈ ವೇಳೆ ಕೋರ್ಟ್​ಗೆ ಧನುಷ್​ ಪರ ವಕೀಲರು ಮನವಿ ಮಾಡಿಕೊಂಡಿದ್ದು, ‘ಧನುಷ್​ ಶೇ.50 ತೆರಿಗೆ ತುಂಬಿದ್ದಾರೆ. ಉಳಿದ ತೆರಿಗೆಯನ್ನು ಪಾವತಿಸಲು ಅವರು ಸಿದ್ಧರಿದ್ದಾರೆ. ಹೀಗಾಗಿ, ಅರ್ಜಿ ಹಿಂಪಡೆಯಲು ಅವಕಾಶ ನೀಡಬೇಕು ಎಂದು ​ ವಕೀಲರು ಕೋರಿದರು. ಆದರೆ, ಕೋರ್ಟ್​ ಇದನ್ನು ನಿರಾಕರಿಸಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss