ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್
ಶಬರಿಮಲೆ ಅಯ್ಯಪ್ಪನ ತಿರುವಂಕೂರು ದೇವಸ್ವ ಮಂಡಳಿ ಗುಡ್ ನ್ಯೂಸ್ ನೀಡಿದ್ದು, ಸೆಪ್ಟೆಂಬರ್ 17 ರಿಂದ ಶಬರಿಮಲೆಯಲ್ಲಿ ಆರಂಭವಾಗಲಿರುವ ಐದು ದಿನಗಳ ಪೂಜಾ ಕಾರ್ಯಗಳಿಗೆ ಭೇಟಿ ನೀಡಲು ಬಯಸುವ ಭಕ್ತರು ಇಂದಿನಿಂದ ಆನ್ ಲೈನ್ ಬುಕ್ಕಿಂಗ್ ಮಾಡಬಹುದಾಗಿದೆ. ದೇವಾಲಯದಲ್ಲಿ ಒಂದು ದಿನಕ್ಕೆ 15 ಸಾವಿರ ಭಕ್ತರ ಪ್ರವೇಶಕ್ಕೆ ಮಾತ್ರ ಅವಕಾಶ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.
ಈ ತಿಂಗಳು ಅಯ್ಯಪ್ಪನ ದರ್ಶನ ಪಡೆಯಲು ಇಚ್ಚಿಸುವ ಭಕ್ತರು ಆರ್ ಟಿಪಿಸಿಆರ್ ಪ್ರಮಾಣ ಪತ್ರ ಹೊಂದಿರಬೇಕು, ಅಥವಾ 2 ಡೋಸ್ ವ್ಯಾಕ್ಸಿನ್ ಪಡೆಯುವುದು ಕಡ್ಡಾಯವಾಗಿರುತ್ತದೆ.
ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಮಾಡಲು ಇಚ್ಚಿಸುವವರು https://www.onlinetdb.com/tdweb/dist/login ಗೆ ಲಾಗಿನ್ ಆಗಬಹುದಾಗಿದೆ.